ಮಂಗಳವಾರ, ಜುಲೈ 27, 2021
21 °C

ಹಾವೇರಿಯ ರಟ್ಟೀಹಳ್ಳಿಯಲ್ಲಿ ಕೊರೊನಾ ವೈರಸ್‌ ಸೋಂಕಿತ ಯುವಕ ನಾಪತ್ತೆ: ಹುಡುಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ರಟ್ಟೀಹಳ್ಳಿ ತಾಲ್ಲೂಕಿನ ಪರ್ವತಶಿದ್ಗೇರಿ ಗ್ರಾಮದಲ್ಲಿ 28 ವರ್ಷದ ಕೋವಿಡ್‌ ಸೋಂಕಿತ ನಾಪತ್ತೆಯಾಗಿರುವ ಘಟನೆ ಭಾನುವಾರ ನಡೆದಿದೆ. 

ಐದು ದಿನಗಳ ಹಿಂದೆ ಬೆಂಗಳೂರಿನಿಂದ ಸ್ವ–ಗ್ರಾಮಕ್ಕೆ ಬಂದಿದ್ದ ಯುವಕನನ್ನು ಗ್ರಾಮಸ್ಥರು ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಹೇಳಿದ್ದರು. ಹೀಗಾಗಿ ರಟ್ಟೀಹಳ್ಳಿ ಸರ್ಕಾರಿ ಆಸ್ಪತ್ರೆಗೆ ಹೋಗಿ ಗಂಟಲು ದ್ರವವನ್ನು ಪರೀಕ್ಷೆಗೆ ಕೊಟ್ಟು ಯುವಕ ಮನೆಗೆ ಬಂದಿದ್ದ. 

ಭಾನುವಾರ ಯುವಕನ ವರದಿ ‘ಪಾಸಿಟಿವ್‌’ ಬಂದ ಕಾರಣ, ಸೋಂಕಿತನನ್ನು ಕರೆತರಲು ವೈದ್ಯಕೀಯ ಸಿಬ್ಬಂದಿ ಆತನ ಮನೆಗೆ ಹೋಗಿದ್ದರು. ಆದರೆ ಯುವಕ ನಾಪತ್ತೆಯಾಗಿರುವುದು ಗೊತ್ತಾಗಿದೆ. ಸೋಂಕಿತನಿಗಾಗಿ ರಟ್ಟೀಹಳ್ಳಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. 

ಸೋಂಕಿತ ಸಿಗದಿದ್ದರೆ ಆತನ ವಿರುದ್ಧ ಪ್ರಕರಣ ದಾಖಲಿಸುವಂತೆ ತಹಶೀಲ್ದಾರ್‌ ಕೆ.ಗುರುಬಸವರಾಜ ಅವರು ರಟ್ಟೀಹಳ್ಳಿ  ಪೊಲೀಸರಿಗೆ ಸೂಚನೆ ನೀಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು