ಬುಧವಾರ, ನವೆಂಬರ್ 25, 2020
26 °C

ಹಾವೇರಿ: ಗ್ರಾಹಕನಿಗೆ ಅನ್ಯಾಯ, ಬ್ಯಾಂಕ್‌ಗೆ ದಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಎಟಿಎಂ ಕೇಂದ್ರದಲ್ಲಿ ಹಣ ಬಾರದೇ ಇದ್ದರೂ ವಿತ್‌ಡ್ರಾ ಆಗಿದೆ ಎಂದು ತೋರಿಸಿದ್ದ ಪ್ರಕರಣದಲ್ಲಿ, ಐದು ದಿನಗಳಲ್ಲಿ ಗ್ರಾಹಕರ ಖಾತೆಗೆ ಹಣ ಜಮಾ ಮಾಡದೆ 10 ತಿಂಗಳು ವಿಳಂಬ ಮಾಡಿದ ಬ್ಯಾಂಕಿಗೆ 30 ದಿನಗಳ ಒಳಗೆ ₹10 ಸಾವಿರ ಹಾಗೂ ಮಾನಸಿಕ ಮತ್ತು ದೈಹಿಕ ವ್ಯಥೆಗೆ ₹3 ಸಾವಿರ ಪರಿಹಾರ ನೀಡುವಂತೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತೀರ್ಪು ನೀಡಿದೆ.

ಬ್ಯಾಡಗಿ ಪಟ್ಟಣದ ಶಿಕ್ಷಕ ಷರೀಫಸಾಬ ರಾಜೇಸಾಬ ಶಿಡೇನೂರ ಅವರು ಎಸ್.ಬಿ.ಐ. ಬ್ಯಾಂಕಿನ ಎ.ಟಿ.ಎಂ. ಕಾರ್ಡ್‌ ಬಳಸಿ ಎಕ್ಸಿಸ್ ಬ್ಯಾಂಕಿನ ಎ.ಟಿ.ಎಂ.ನಲ್ಲಿ ಡಿ.2, 2019ರಂದು ₹10 ಸಾವಿರ ಡ್ರಾ ಮಾಡಲು ಹೋದಾಗ ಹಣ ಬಾರದೇ ಇದ್ದರೂ, ₹10,000 ಸಾವಿರ ವಿತ್‍ಡ್ರಾ ಆಗಿರುವುದಾಗಿ ಸಂದೇಶ ಬಂದಿತ್ತು. 

ಈ ಕುರಿತು ಷರೀಫಸಾಬ ಸಂಬಂಧಪಟ್ಟ ಬ್ಯಾಡಗಿ ಎಸ್.ಬಿ.ಐ. ಹಾಗೂ ಎಕ್ಸಿಸ್ ಬ್ಯಾಂಕ್ ಶಾಖೆಗಳನ್ನು ಸಂಪರ್ಕಿಸಿ ತಮಗಾದ ಸಮಸ್ಯೆಯನ್ನು ಹೇಳಿಕೊಂಡಿದ್ದರು. ಬ್ಯಾಂಕ್ ಶಾಖೆಗಳು ಯಾವುದೇ ಕ್ರಮ ಕೈಗೊಳ್ಳದ ಕಾರಣ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಎಸ್.ಬಿ.ಐ. ಬ್ಯಾಂಕಿನ ಶಾಖಾ ವ್ಯವಸ್ಥಾಪಕರು ಗ್ರಾಹಕನ ಖಾತೆಗೆ ಹಣ ಡ್ರಾ ಮಾಡಿದ ಐದು ದಿನದಿಂದ ಗ್ರಾಹಕನ ಖಾತೆಗೆ ₹10 ಸಾವಿರ ಹಿಂದಿರುಗಿಸುವವರೆಗೆ ಪ್ರತಿ ದಿನಕ್ಕೆ ₹100 ದಂಡ ಜಮೆ ಮಾಡಬೇಕು. ಎಕ್ಸಿಸ್ ಬ್ಯಾಂಕ್ ಶಾಖೆ ವ್ಯವಸ್ಥಾಪಕರು ದಾವೆಯ ಖರ್ಚು ₹2 ಸಾವಿರ ಹಾಗೂ ಮಾನಸಿಕ ಮತ್ತು ದೈಹಿಕ ವ್ಯಥೆಗಾಗಿ ₹3 ಸಾವಿರವನ್ನು ಗ್ರಾಹಕನ ಖಾತೆಗೆ ಜಮೆ ಮಾಡಲು ಆದೇಶಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು