ಶುಕ್ರವಾರ, ಮೇ 27, 2022
30 °C
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಪ್ರಭುಲಿಂಗಪ್ಪ ಹಲಗೇರಿ

ಗಳಗನಾಥ ಪ್ರಶಸ್ತಿ ಸ್ಥಾಪನೆಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಹಾಗೂ ಕೋವಿಡ್-19 ನಿಯಮಾನುಸಾರ ನಡೆಸುವುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಪ್ರಭುಲಿಂಗಪ್ಪ ಹಲಗೇರಿ ಹೇಳಿದರು. 

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ನ.21ರಂದು ನಡೆಯಲಿರುವ ಚುನಾವಣೆಯಲ್ಲಿ ಅಧಿಕ ಮತಗಳನ್ನು ನೀಡುವ ಮೂಲಕ ಕನ್ನಡ ತಾಯಿಯ ಸೇವೆ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು. 

ಹಾವೇರಿ ನಗರದಲ್ಲಿ ಜಿಲ್ಲಾ ಸಾಹಿತ್ಯ ಭವನ ನಿರ್ಮಿಸಲು ಶ್ರಮಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಸಾಹಿತ್ಯ ಸಮ್ಮೇಳನ ಆಯೋಜಿಸುವುದು. ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಿಸುವುದು. ದತ್ತಿ ನಿಧಿಯನ್ನು ಸಂಗ್ರಹಿಸಿ ಪರಿಚಯಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವುದು. ನಗರ ವೃತ್ತಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ, ಹುತಾತ್ಮ ಯೋಧರ ಪುತ್ಥಳಿಗಳನ್ನು ನಿರ್ಮಿಸಲು ಆದ್ಯತೆ ನೀಡುತ್ತೇನೆ ಎಂದರು. 

ಕಾದಂಬರಿ ಪಿತಾಮಹ ಗಳಗನಾಥರ ಸ್ಮರಣೆಗಾಗಿ 'ಗಳಗನಾಥ ಪ್ರಶಸ್ತಿ’, ‘ಹೆಳವನಕಟ್ಟಿ ಗಿರಿಯಮ್ಮ’ ಪ್ರಶಸ್ತಿಗಳನ್ನು ಸ್ಥಾಪಿಸಿ, ರಾಜ್ಯ ಮಟ್ಟದಲ್ಲಿ ಕವಿ, ಸಾಹಿತಿ, ಕಲಾವಿದರನ್ನು, ಕಂಚಿನ ಪದಕ, ಪ್ರಶಸ್ತಿ ಪತ್ರ ಹಾಗೂ ₹50 ಸಾವಿರ ನಗದು ಪುರಸ್ಕಾರದೊಂದಿಗೆ ಸತ್ಕರಿಸುವಂತೆ ಕೇಂದ್ರ ಸಮಿತಿಗೆ ಒತ್ತಾಯಿಸುತ್ತೇನೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಾಹಿತಿ ವಿರುಪಾಕ್ಷಪ್ಪ ಕೊರಗಲ್, ಡಿ.ಎಸ್ ಮಾಳಗಿ, ವಿ.ಬಿ ಹರಪನಹಳ್ಳಿ, ಶೇಖಪ್ಪ ಕಳ್ಳಿಮನಿ, ಕಾಳಪ್ಪ ಬಡಿಗೇರ, ಸುರೇಶ ವಾಲ್ಮೀಕಿ, ಮಹಾಂತೇಶ್ ಬಳಿಗಾರ, ಬಿ.ಎಸ್ ಸಣ್ಣಗೋಣಿ ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.