ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಪ್ಯಾಕೇಜ್‌ ಘೋಷಣೆಗೆ ಒತ್ತಾಯ

Last Updated 24 ಸೆಪ್ಟೆಂಬರ್ 2020, 15:54 IST
ಅಕ್ಷರ ಗಾತ್ರ

ಹಾವೇರಿ: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ ಜಿಲ್ಲಾ ಸಮಿತಿ ಪದಾಧಿಕಾರಿಗಳು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

ಜನತೆ ಹಾಗೂ ದೇಶವನ್ನು ಕೋವಿಡ್ -19 ಹಾಗೂ ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಲು ನಮ್ಮ ಹಕ್ಕೊತ್ತಾಯಗಳನ್ನು ಈಡೇರಿಸಬೇಕು. ಅದಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಮತ್ತು ಜನದ್ರೋಹಿ ತಿದ್ದುಪಡಿ ಕಾಯ್ದೆಗಳುಹಾಗೂ ಸಾರ್ವಜನಿಕ ರಂಗದ ಕೈಗಾರಿಕೆಗಳು ಹಾಗೂ ಹಣಕಾಸು ಸಂಸ್ಥೆಗಳ ಖಾಸಗೀಕರಣವನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿ ಕುಟುಂಬಗಳಿಗೆ ಮಾಸಿಕ ₹7,500 ನೆರವು ಘೋಷಿಸಬೇಕು. ಕುಟುಂಬಗಳ ಸದಸ್ಯರಿಗೆ ಮಾಸಿಕ ತಲಾ 10 ಕೆ.ಜಿ. ಸಮಗ್ರ ಆಹಾರ ಸಾಮಗ್ರಿಗಳನ್ನು ಒದಗಿಸಬೇಕು. ಕನಿಷ್ಠ 200 ದಿನಗಳ ಉದ್ಯೋಗ ನೀಡಬೇಕು. ಕೂಲಿ ಹಣವನ್ನು ಕನಿಷ್ಠ ₹600ಕ್ಕೆ ಹೆಚ್ಚಿಸಬೇಕು. ಆರೋಗ್ಯ ಸುರಕ್ಷತಾ ಸಾಮಾಗ್ರಿಗಳ ಕಿಟ್‌ ಅನ್ನು ಒದಗಿಸಬೇಕು. ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ಮಾಸಿಕ ₹10 ಸಾವಿರ ಒದಗಿಸಬೇಕು ಎಂದು ಆಗ್ರಹಿಸಿದರು.

ಸಿ.ಐ.ಟಿ.ಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ, ಸಿಐಟಿಯು ಜಿಲ್ಲಾ ಮುಖಂಡ ಅಂದಾನೆಪ್ಪ ಹೆಬಸೂರ, ಪರಮೇಶ ಪುರದ, ಕುಮಾರ ದೇವಗಿರಿ, ಈರನಗೌಡ ಪಾಟೀಲ, ಮಾರುತಿ ಬಾವಣ್ಣನವರ, ವೆಂಕಟೇಶ ಎಚ್, ಸುಭಾಸಚಂದ್ರ ಹೊಸಗೌಡ್ರ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT