ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಮತದಾರರ ದೋಷರಹಿತ ಪಟ್ಟಿ ತಯಾರಿಗೆ ಸೂಚನೆ

ತಹಶೀಲ್ದಾರ್‌ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿಶಾಲ್ ಸೂಚನೆ
Published 27 ಡಿಸೆಂಬರ್ 2023, 15:47 IST
Last Updated 27 ಡಿಸೆಂಬರ್ 2023, 15:47 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಮತದಾರರ ದೋಷರಹಿತ ಪಟ್ಟಿಯನ್ನು ಸಿದ್ಧಪಡಿಸುವಂತೆ ಎಲ್ಲ ತಹಶೀಲ್ದಾರ್‌ಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ವಿಶಾಲ್ ಆರ್. ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ 2024ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿ ಕುರಿತಾಗಿ ಅಧಿಕಾರಿಗಳ ಸಭೆ ನಡೆಸಿದ ಅವರು ಮಾತನಾಡಿದರು. 

ಮಹಿಳಾ ಮತದಾರರ ಪ್ರಮಾಣ ಕಡಿಮೆ ಇದೆ, ಯಾವ ಪ್ರದೇಶದಲ್ಲಿ ಮಹಿಳಾ ಮತದಾರರ ನೋಂದಣಿ ಕಡಿಮೆ ಇದೆ ಎಂದು ಪರಿಶೀಲಿಸಿ, ನೋಂದಣಿಗೆ ಕ್ರಮವಹಿಸಲು ಸೂಚನೆ ನೀಡಿದರು.

ಗೃಹಲಕ್ಷ್ಮೀ ಫಲಾನುಭವಿಗಳ ಪೈಕಿ ಮತದಾರರ ಪಟ್ಟಿಯಿಂದ ಹೊರಗುಳಿದವರನ್ನು ಪತ್ತೆ ಮಾಡಿ, ನೋಂದಣಿಗೆ ಕ್ರಮವಹಿಸಬೇಕು. ಜಿಲ್ಲೆಯ ಅಂಗವಿಕಲ ಮತದಾರರ ನೋಂದಣಿ ಪರಿಶೀಲಿಸಿದಾಗ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚಿರುವುದು ಕಂಡುಬಂದಿದೆ. ಈ ಕುರಿತಂತೆ ಪರಿಶೀಲಿಸಿ ಯಾರಾದರೂ ಅಂಗವಿಕಲ ಮಹಿಳೆಯರು ಮತದಾರರ ಪಟ್ಟಿಯಲ್ಲಿ ಕೈಬಿಟ್ಟು ಹೋಗಿದ್ದರೆ ನೋಂದಣಿಗೆ ಕ್ರಮವಹಿಸುವಂತೆ ಸೂಚನೆ ನೀಡಿದರು.

ಮೃತ ವ್ಯಕ್ತಿಗಳು ಮತದಾರರ ಪಟ್ಟಿಯಲ್ಲಿ ಮುಂದುವರಿದಿದ್ದರೆ ಅವರ ಕುಟುಂಬದ ನಮೂನೆ-7 ಅನ್ನು ಪಡೆದು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಸೂಚನೆ ನೀಡಿದರು.

ಹೊಸದಾಗಿ ನೋಂದಾಯಿತ ಮತದಾರರ ಅಂಚೆ ಮೂಲಕ ಮತದಾರರ ಗುರುತಿನ ಕಾರ್ಡ್ ಕಳುಹಿಸಲು ಕ್ರಮವಹಿಸುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿಗಳಾದ ಚನ್ನಪ್ಪ ಹಾಗೂ ಮಹ್ಮದ ಖಿಜರ್ ಹಾಗೂ ತಹಶೀಲ್ದಾರ್‌ಗಳು ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT