ಸೋಮವಾರ, ಸೆಪ್ಟೆಂಬರ್ 20, 2021
22 °C

ಅಂತರವಳ್ಳಿ ಸಮಸ್ಯೆ ಶೀಘ್ರ ಇತ್ಯರ್ಥಪಡಿಸಿ: ಜಿಲ್ಲಾಧಿಕಾರಿ ಶೆಟ್ಟೆಣ್ಣವರ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಸಾಲಮನ್ನಾ ಯೋಜನೆಯಡಿ ರಾಣೆಬೆನ್ನೂರು ತಾಲ್ಲೂಕಿನ ಅಂತರವಳ್ಳಿ ಗ್ರಾಮದ ರೈತರ ಖಾತೆಗೆ ಹಣ ಜಮೆಯಾಗದ ಬಹುದಿನಗಳ ಸಮಸ್ಯೆಯನ್ನು ಒಂದು ವಾರದೊಳಗಾಗಿ ಇತ್ಯರ್ಥಪಡಿಸಲು ಬ್ಯಾಂಕ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂತರವಳ್ಳಿ ಗ್ರಾಮದ ರೈತರ ಸಾಲ ಮನ್ನಾ ಯೋಜನೆ ಸಮಸ್ಯೆ ಕುರಿತಂತೆ ಜಿಲ್ಲಾ ಲೀಡ್‌ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿ, ಸಮಸ್ಯೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಂಡುವಂತೆ ಸೂಚನೆ ನೀಡಿದರು.

ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಾಲ ಮನ್ನಾ ಯೋಜನೆಯಡಿ ಅಂತರವಳ್ಳಿ ಗ್ರಾಮದ ಅಂದಾಜು 300 ರೈತರ ಸಾಲ ಮನ್ನಾವಾಗಿದ್ದರೂ ಇಂಡಿಯನ್ ಬ್ಯಾಂಕ್ ವ್ಯವಸ್ಥಾಪಕರು ರೈತರಿಗೆ ಸರಿಯಾದ ಮಾಹಿತಿ ನೀಡದೆ ತೊಂದರೆ ಮಾಡುತ್ತಿರುವ ಕುರಿತಂತೆ ಜಿಲ್ಲಾಧಿಕಾರಿಗೆ ದೂರು ನೀಡಲಾಗಿತ್ತು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌. ಯೋಗೇಶ್ವರ, ಕೃಷಿ ಜಂಟಿ ನಿರ್ದೇಶಕ ಮಂಜುನಾಥ, ಜಿಲ್ಲಾ ಲೀಡ್‌ ಬ್ಯಾಂಕ್ ವ್ಯವಸ್ಥಾಪಕ ಪ್ರಭುದೇವ, ತಹಶೀಲ್ದಾರ್‌ ಶಂಕರ, ಸಹಕಾರಿ ಸಂಘಗಳ ಉಪನಿಬಂಧಕ ಹಾಗೂ ಇಂಡಿಯನ್ ಬ್ಯಾಂಕಿನ ಅಧಿಕಾರಿಗಳು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು