ರಾಣೆಬೆನ್ನೂರು: ಬಾಹ್ಯಾಕಾಶ ಸಂಶೋಧನೆ, ಮಾಹಿತಿ ತಂತ್ರಜ್ಞಾನ ಮತ್ತು ಆರೋಗ್ಯ ಸೇವೆಗಳಂತಹ ವೈಜ್ಞಾನಿಕ ಕ್ಷೇತ್ರದಲ್ಲಿ ಭಾರತ ದೇಶವು ಮಹತ್ವದ ಸಾಧನೆಗಳನ್ನು ಮಾಡಿ ವಿಶ್ವದ ಇತರ ರಾಷ್ಟ್ರಗಳಿಗೆ ಮಾದರಿಯಾಗಿದೆ ಎಂದು ಇಸ್ರೋ ವಿಜ್ಞಾನಿ ಮಲ್ಲಿಕಾರ್ಜುನ ಕೆ ಹೇಳಿದರು.

ನಗರದ ಹೊರವಲಯದ ಓಂ ಪಬ್ಲಿಕ್ ಶಾಲೆ ಸಭಾಂಗಣದಲ್ಲಿ ಸೋಮವಾರ ಪಿಕೆಕೆ ಇನಿಷಿಯೇಟಿವ್ಸ್ ಸಂಸ್ಥೆಯಿಂದ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸೆಮಿನಾರ್ ಉದ್ಘಾಟಿಸಿ ಅವರು ಮಾತನಾಡಿದರು.

ಇಸ್ರೋ ಯಶಸ್ವಿಯಾಗಿ ಸೌರ ಮತ್ತು ಚಂದ್ರನ ಗ್ರಹಗಳಿಗೆ ಮಿಷನ್ಗಳನ್ನು ಕಳುಹಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಕ್ಷಿಪಣಿ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಇನ್ಫೋಸಿಸ್ನಂತಹ ಸಂಸ್ಥೆಗಳು ಸಾಫ್ಟ್ವೇರ್ ಅಭಿವೃದ್ಧಿಯಲ್ಲಿ ಅದ್ಭುತ ಸಾಧನೆ ಮಾಡಿದೆ ಎಂದರು.

ಶಾಸಕ ಪ್ರಕಾಶ ಕೋಳಿವಾಡ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನ ಜೊತೆಗೆ ಕೌಶಲ್ಯ ಅಭಿವೃದ್ಧಿಯು ಅವಶ್ಯಕವಾಗಿ ಬೇಕಾಗಿದೆ. ಓದು ಬುದ್ಧಿಯನ್ನು ಚುರುಕುಗೊಳಿಸಿದರೆ, ಕೌಶಲ್ಯ ಉದ್ಯೋಗವನ್ನು ಸೃಷ್ಟಿಸುತ್ತದೆ. ಕೌಶಲ್ಯಗಳನ್ನು ಅಳವಡಿಸಿಕೊಂಡು ಉಜ್ವಲ ಭವಿಷ್ಯ ಹೊಂದಬೇಕು ಎಂದರು.

ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮತ್ತು ಎಸ್ಪಿ ಯಶೋಧಾ ವಂಟಗೋಡಿ ಅವರು ಮಾತನಾಡಿದರು.

ಓಂ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ರುಕ್ಮಿಣಿಬಾಯಿ ಸಾವುಕಾರ, ಕಾರ್ಯದರ್ಶಿ ವೈದ್ಯ ಡಾ.ಮನೋಜ ಸಾವುಕಾರ, ಲತಾ ನಿಟ್ಟೂರ, ಶಿಲ್ಪಾ ಸಾವುಕಾರ, ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.