ಸೋಮವಾರ, ಡಿಸೆಂಬರ್ 16, 2019
18 °C

ಮಾಜಿ ಸ್ವೀಕರ್‌ ಕೆ. ಬಿ.ಕೋಳವಾಡ ನಿವಾಸದ ಮೇಲೆ ಐಟಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಣೆಬೆನ್ನೂರು: ಉಪ ಚುನಾವಣೆ ಮತದಾನಕ್ಕೆ ಒಂದು ದಿನ ಬಾಕಿ ಇರುವಾಗಲೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆ.ಬಿ.ಕೋಳಿವಾಡ ಅವರ ವಾಗೀಶನಗರದ ಕಾಂಗ್ರೆಸ್‌ ಕಚೇರಿ ಮತ್ತು ವಾಸದ ಮನೆ ಮೇಲೆ ಐಟಿ ಮತ್ತು ಅಬಕಾರಿ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಮತ್ತು ಮದ್ಯ ದಾಸ್ತಾನು ಇರುವ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಮನೆಯಲ್ಲಿ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಐಟಿ ಅಧಿಕಾರಿಗಳ ದಾಳಿ ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಕ್ರಿಯಿಸಿ (+)