ಹಾವೇರಿ: ‘ಜಗದ್ಗುರು ರೇಣುಕಾಚಾರ್ಯರು ಸಾಮಾನ್ಯರಲ್ಲ. ಜನ ಸಮುದಾಯದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಕೃತಿ ಬೆಳೆಸಿದ ಪರಮಾಚಾರ್ಯರು. ಸೌಹಾರ್ದ, ಸಹಬಾಳ್ವೆಯ ಮಹತ್ವವನ್ನು ನಾಡಿನ ಜನತೆಗೆ ತಿಳಿಸಿದವರು. ಅವರ ತತ್ವಗಳು ವಿಶ್ವಶಾಂತಿ ಸಾರಿವೆ’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ ಹೇಳಿದರು.

ನಗರದ ಜಗದ್ಗುರು ರೇಣುಕ ಮಂದಿರದಲ್ಲಿ (ನಡುವಿನಮಠ) ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಗದ್ಗುರು ರೇಣುಕಾಚಾರ್ಯ ಸೇವಾ ಸಮಿತಿ ಸಹಯೋಗದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಜಗದ್ಗುರು ರೇಣುಕಾಚಾರ್ಯರು ಹೇಳಿದ್ದಾರೆ. ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ನಡೆದುಕೊಂಡು ಹೋಗಬೇಕು. ಇಂತಹ ಮಹಾನ್ ವ್ಯಕ್ತಿಗಳ ಬಗ್ಗೆ ತಿಳಿದುಕೊಂಡು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳಿಂದ ಜನರಲ್ಲಿ ಜಾಗೃತಿ ಮೂಡಿಸಬೇಕು. ಮುಂದಿನ ಪೀಳಿಗೆಗೆ ಅನುಕೂಲವಾಗುವಂತೆ ಮಾಡಬೇಕು. ರೇಣುಕಾಚಾರ್ಯರು ಬೋಧಿಸಿದ ಸಾಮಾಜಿಕ, ಸಮಾನತೆ ಸಮಾಜದಲ್ಲಿನ ಮೇಲು–ಕೀಳು ಭಾವನೆಯನ್ನು ಹೋಗಲಾಡಿಸಬೇಕು’ ಎಂದು ಹೇಳಿದರು.

ಹಲಸೂರು ಬಣ್ಣದಮಠ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ನಿವೃತ್ತ ಪ್ರಾಂಶುಪಾಲ ಪಿ.ಸಿ. ಹೀರೆಮಠ ಅವರು ಜಗದ್ಗುರು ರೇಣುಕಾಚಾರ್ಯರ ಪುರಾಣಗಳ ತತ್ವಗಳು ಹಾಗೂ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿ ಅಧ್ಯಕ್ಷ ಎಂ.ಎಂ, ಮೈದೂರ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಕೋರಿಶೆಟ್ಟರ, ಸಮಾಜದ ಮುಖಂಡರು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.