ಹಾವೇರಿ: ಕೇಂದ್ರ ಸಚಿವ ಭಗವಂತ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ‘ನಮ್ಮಿಂದ ತಪ್ಪಾಗಿದೆ. ಸಮರ್ಥನೆ ಮಾಡುವ ರಾಜಕಾರಣಿ ನಾನಲ್ಲ. ನನಗೆ ಬದ್ಧತೆಯಿದೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಇಲಾಖೆಯ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ ತಪ್ಪೊಪ್ಪಿಕೊಂಡಿದ್ದಾರೆ.

ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಜನಾಶೀರ್ವಾದ ಯಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಸಿಬ್ಬಂದಿ ಅಮಾನತುಗೊಂಡಿದ್ದಾರೆ. ನಿಮ್ಮ ತಪ್ಪಿಗೆ ಅವರೇಕೆ ಶಿಕ್ಷೆ ಅನುಭವಿಸಬೇಕು ಎಂಬ ಪತ್ರಕರ್ತರ ಪ್ರಶ್ನೆಗೆ ಎ. ನಾರಾಯಣಸ್ವಾಮಿ ಪ್ರತಿಕ್ರಿಯಿಸಿದರು.

ಯಾದಗಿರಿ ಜಿಲ್ಲೆಯ ಗಡಿ ಗ್ರಾಮ ಯರಗೋಳದಲ್ಲಿಸಚಿವರನ್ನು ಮೆರವಣಿಗೆ ಮೂಲಕ ಭರ್ಜರಿಯಾಗಿ ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಸಿದ್ಧತೆ ನಡೆಸಿದ್ದರು.ಈ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದಘಟನೆ ನಡೆದಿದೆ. ಇದರ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಕಾರ್ಯಕರ್ತರ ನಡೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ಕೇಳಿಬಂದಿತ್ತು. ಪ್ರತಿಪಕ್ಷಗಳ ಕೆಲವು ನಾಯಕರು ಇದನ್ನು ತಾಲಿಬಾನ್ ಸಂಸ್ಕೃತಿ ಎಂದೆಲ್ಲ ಟೀಕಿಸಿದ್ದರು.

ಬ್ರಿಟಿಷರ ಗುಂಡಿಗೆ ಎದೆ ಕೊಟ್ಟವರ ವಿವರ ಕಾಂಗ್ರೆಸ್ ನೀಡಲಿ:ಎ.ನಾರಾಯಣಸ್ವಾಮಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.