ಟೀಕಿಸುವುದೇ ಬಿಜೆಪಿಯ ಉದ್ಯೋಗ : ಕೋನರೆಡ್ಡಿ

7

ಟೀಕಿಸುವುದೇ ಬಿಜೆಪಿಯ ಉದ್ಯೋಗ : ಕೋನರೆಡ್ಡಿ

Published:
Updated:

ಹಾವೇರಿ:  ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರನ್ನು ಪ್ರತಿದಿನ ಟೀಕಿಸುವುದೇ ಬಿಜೆಪಿಯವರಿಗೆ ಉದ್ಯೋಗವಾಗಿದೆ ಎಂದು ಜೆಡಿಎಸ್‌ ಮುಖಂಡ ಎನ್‌.ಎಚ್‌.ಕೋನರೆಡ್ಡಿ ಟೀಕಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಅತಿಹೆಚ್ಚು ರೈತರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಹೀಗಾಗಿ, ಅಲ್ಲಿನ ರೈತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸುವ ಸಲುವಾಗಿ ಎಚ್.ಡಿ.ಕುಮಾರಸ್ವಾಮಿ ಅವರು ಭತ್ತದ ನಾಟಿ ಮಾಡಿದ್ದರು. ಇದನ್ನು ಬಿಜೆಪಿ ಟೀಕಿಸಿದೆ. ಉದ್ಯಮಿಗಳ ಕೋಟಿಗಟ್ಟಲೆ ಸಾಲ ಮನ್ನಾ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ರೈತರ ಸಾಲ ಮನ್ನಾ ಬಗ್ಗೆ ಚಕಾರ ಎತ್ತಿಲ್ಲ. ಆದರೆ, ಸಾಲ ಮನ್ನಾ ಮಾಡಿದ ಕುಮಾರಸ್ವಾಮಿ ಅವರು, ಈ ಕುರಿತು ಮಾತನಾಡಿದ್ದನ್ನೂ ಬಿಜೆಪಿಯವರು ಟೀಕೆ ಮಾಡಿದ್ದಾರೆ ಎಂದರು.

ಆದರೆ, ಬಿಜೆಪಿಯ ಟೀಕೆಗಳಿಗೆ ಜೆಡಿಎಸ್‌ ಜಗ್ಗುವುದಿಲ್ಲ. ಅವರು ಎಷ್ಟೇ ಅಸೂಯೆ ಪಟ್ಟರೂ, ನಾವು ನಮ್ಮ ಪಕ್ಷ ಸಂಘಟನೆ ನಿಲ್ಲಿಸುವುದಿಲ್ಲ ಎಂದ ಅವರು, ಕೇಂದ್ರದಲ್ಲಿ ನಾಲ್ಕೂವರೆ ವರ್ಷಗಳಿಂದ ಅಧಿಕಾರದಲ್ಲಿ ಇರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ರಾಜ್ಯಕ್ಕೆ ಏನು ಕೊಡುಗೆ ನೀಡಿದೆ? ಎಂಬುದನ್ನು ಅವರು ಮೊದಲು ಜನತೆಗೆ ತಿಳಿಸಲಿ ಎಂದು ಸವಾಲು ಹಾಕಿದರು.

‘ಜೆಡಿಎಸ್ 113 ಸ್ಥಾನ ಜಯಿಸಿದರೆ, ಅಧಿಕಾರ ಸ್ವೀಕರಿಸಿದ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುತ್ತೇನೆ’ ಎಂದು ಕುಮಾರಸ್ವಾಮಿಯವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ್ದರು. ಆದರೆ, ಈ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಸಾಲ ಮನ್ನಾ ಮಾಡಲು ಸ್ವಲ ಕಾಲಾವಕಾಶ ಬೇಕಾಗುತ್ತದೆ ಎಂದರು.

ವರ್ಗಾವಣೆ ವಿಚಾರವಾಗಿ ಬಿಜೆಪಿಯ ಶಾಸಕ ಈಶ್ವರಪ್ಪ ಅವರು ನೀಡಿದ್ದ ಹೇಳಿಕೆ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೋನರೆಡ್ಡಿ, ‘ಈಶ್ವರಪ್ಪನವರೇ ನೀವು ಏನು ಮಾಡಿದ್ದೀರಿ ಅನ್ನೋದನ್ನ ನಾವು ಬಾಯಿ ಬಿಟ್ರೆ ಸರಿ ಇರಲ್ಲ’ ಎಂದು ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳು ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದಾರೆ. ಪ್ರತಿ ಜಿಲ್ಲೆಯ ಒಂದು ಹಳ್ಳಿಯಲ್ಲಿ ವಾಸ್ತವ್ಯ ಮಾಡಿ, ಸಮಸ್ಯೆಗಳಿಗೆ ಪರಿಹಾರ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ಹೇಳಿದರು.

ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಸ್ಥಳೀಯ ನಾಯಕರುಗಳ ತೀರ್ಮಾನದಂತೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಷ್ಟೇ ನಮ್ಮ ಮುಖ್ಯ ಗುರಿ ಎಂದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಸಂಜಯ ಡಾಂಗೆ, ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ ಬೇವಿನ ಮರದ, ಉಮೇಶ ತಳವಾರ ಇದ್ದರು.

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !