ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಇ ಲಸಿಕಾ ಅಭಿಯಾನಕ್ಕೆ ಚಾಲನೆ

Last Updated 5 ಡಿಸೆಂಬರ್ 2022, 14:41 IST
ಅಕ್ಷರ ಗಾತ್ರ

ಹಾವೇರಿ: ಮಿದುಳು ಜ್ವರ ತಡೆಗಟ್ಟಲು ಜಿಲ್ಲೆಯಲ್ಲಿ ಜಪಾನೀಸ್ ಎನ್‍ಸೆಫಲೈಟಿಸ್ (ಜೆಇ) ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಂದು ಮಗುವು ಈ ಲಸಿಕೆಯಿಂದ ಹೊರಗುಳಿಯದಂತೆ ಕ್ರಮಕೈಗೊಂಡು ಯಶಸ್ವಿಗೊಳಿಸಲು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.8ರಲ್ಲಿ ಸೋಮವಾರ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಹಾಗೂ ಹಾವೇರಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಿಇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪೋಷಕರು ತಮ್ಮ 1ರಿಂದ 15 ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿ ಮತ್ತು ಶಾಲೆಗಳಲ್ಲಿ ಜೆಇ ಲಸಿಕೆ ಹಾಕಿಸಿ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಎಂ.ಜಯಾನಂದ ಮಾತನಾಡಿ, ಜಿಲ್ಲೆಯಲ್ಲಿ 1 ರಿಂದ 15 ವರ್ಷದೊಳಗಿನ 4,14,403 ಮಕ್ಕಳಿದ್ದು, ಎಲ್ಲ ಮಕ್ಕಳಿಗೆ ಲಸಿಕೆ ನೀಡಲು 451 ವ್ಯಾಕ್ಸಿನೇಟರ್ಸ್ ಹಾಗೂ 128 ಮೇಲ್ವಿಚಾರಣಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕುಮಾರಸ್ವಾಮಿ ಪಿ.ಸಿ. ಮಾತನಾಡಿ, ಜೆಇ ಲಸಿಕೆಯಿಂದ ಮಿದುಳು ಜ್ವರದ ವಿರುದ್ಧ ಸಾರೋಣ ಯುದ್ದ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಹಾಜರಿದ್ದರು. ಶಿಕ್ಷಕ ಗೋವಿಂದಪ್ಪ ಕಾರ್ಯಕ್ರಮದ ನಿರೂಪಿಸಿದರು. ಮುಖ್ಯ ಶಿಕ್ಷಕ ಗಡ್ಡದ ಅವರು ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT