ರಾಣೆಬೆನ್ನೂರು: ತಾಲ್ಲೂಕಿನ ಕೆರಿಮಲ್ಲಾಪುರ ಗ್ರಾಮದ ಸುರೇಶ ಕೊಟ್ರಪ್ಪ ಮರಡೆಣ್ಣನವರ ಅವರ ಮನೆಯ ಬೀಗ ಮುರಿದು ಒಳಗೆ ನುಗ್ಗಿದ ಕಳ್ಳರು ₹1 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.
ಸುರೇಶ್ ಅವರು ಮನೆಯ ಬೀಗ ಹಾಕಿಕೊಂಡು ಕುಟುಂಬದ ಸದಸ್ಯರೊಂದಿಗೆ ಈಚೆಗೆ ಸಂಬಂಧಿಕರ ಮನೆಗೆ ಹೋಗಿದ್ದಾಗ ಘಟನೆ ನಡೆದಿದೆ. ಚಿನ್ನಾಭರಣ, ಬೆಳ್ಳಿಯ ವಸ್ತುಗಳು, ನಗದು, ಟಿ.ವಿ ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.