ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪತ್ರಕರ್ತನ ಕೊಲೆ: ಪ್ರಭುತ್ವದ ವೈಫಲ್ಯ’

Last Updated 10 ನವೆಂಬರ್ 2020, 14:37 IST
ಅಕ್ಷರ ಗಾತ್ರ

ಹಾವೇರಿ: ‘ಡ್ರಗ್ಸ್ ಜಾಲವನ್ನು ಬಯಲಿಗೆಳೆಯುತ್ತಾನೆ ಎಂದು ದುಷ್ಕರ್ಮಿಗಳು ಟಿವಿ ಪತ್ರಕರ್ತ ಇಸ್ರೇವೆಲ್ ಮೋಸಸ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆಯು ಪ್ರಭುತ್ವದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ’ ಎಂದು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಾಂಜಾ ಸೇರಿದಂತೆ ಇತರೆ ಮಾದಕ ವಸ್ತುಗಳ ಮಾರಾಟದ ಬಗ್ಗೆ ಮೋಸೆಸ್ ವರದಿ ಮಾಡಿದ ಬಳಿಕ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಮೋಸೆಸ್ ಅವರು ದೂರು ನೀಡಿದರೂ, ಪೊಲೀಸರು ಯಾವುದೇ ರೀತಿಯ ಕ್ರಮ ಕೈಗೊಳ್ಳದ ಕಾರಣ ಅವರ ಕೊಲೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಭೋಪಾಲ್‌ನ ಕಾಡಿನಲ್ಲಿ ಸ್ಥಳೀಯ ಟಿವಿ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತ ಸೈಯದ್ ಆದಿಲ್ ವಹಾಬ್ ಶವ ಪತ್ತೆಯಾಗಿದೆ. ಪತ್ರಕರ್ತರಿಗೆ ದೇಶದಲ್ಲಿ ಭದ್ರತೆ ಸಿಗುತ್ತಿಲ್ಲ ಎಂಬುದು ಆತಂಕಕಾರಿ ಹಾಗೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದರು.

ಕೂಡಲೇ ರಾಷ್ಟ್ರಪತಿಗಳವರು ಈ ಕುರಿತು ಸಮಗ್ರ ತನಿಖೆ ನಡೆಸಿ ಪತ್ರಕರ್ತರ ಸಾವಿಗೆ ಕಾರಣರಾದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಅಭದ್ರತೆಯಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ಭದ್ರತೆ ಒದಗಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ತುರ್ತು ನಿರ್ದೇಶನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT