ಬ್ಯಾಡಗಿ: ಬೆಂಗಳೂರಿನಲ್ಲಿ ಬುಧವಾರ ಜರುಗಿದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು ₹34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಕುರಿತು ಮಾಹಿತಿ ನೀಡಿದ ಅವರು ಕಾಗಿನೆಲೆಯಲ್ಲಿ ಪ್ರತಿ ವರ್ಷ ಆಯೋಜಿಸುವ ಕನಕ ಉತ್ಸವದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿ ಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನಕ ಅಧ್ಯಯನ ಪೀಠ ಸಮನ್ವಯದಿಂದ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕಾಗಿದ್ದು, ಪ್ರಾಧಿಕಾರದಲ್ಲಿ ಸಂಚಿತ ನಿಧಿ ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಬೇಕು. ಹಾಗೂ ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂದರು.

ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಉದ್ಯಾನಗಳ ವಾರ್ಷಿಕ ನಿರ್ವಹಣೆ ಗುತ್ತಿಗೆ ನೀಡುವ ಕುರಿತು ಹಾಗೂ ಕನಕ ಪರಿಸರ ಉದ್ಯಾನದಲ್ಲಿ ಇರುವ ಖಾಲಿ ಜಾಗದಲ್ಲಿ ಬಟಾನಿಕಲ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಗಿದೆ. ಉಳಿದಂತೆ ಕಾಗಿನೆಲೆ ಗ್ರಾಮದ ವ್ಯಾಪ್ತಿಯಲ್ಲಿ ಇತರ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಕೈಗೊಳ್ಳಲು ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.