ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ: ಎರಡು ದಿನ ಹಾವೇರಿ ಜಿಲ್ಲಾ ಶಾಲಾ-ಕಾಲೇಜುಗಳಿಗೆ ರಜೆ

Last Updated 5 ಜನವರಿ 2023, 14:47 IST
ಅಕ್ಷರ ಗಾತ್ರ

ಹಾವೇರಿ: ಜನವರಿ 6,7 ಮತ್ತು 8 ರಂದು ಹಾವೇರಿ ನಗರದಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಈ ಹಿನ್ನಲೆಯಲ್ಲಿ ಜ.6 ಮತ್ತು 7 ರಂದು ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜು ಹಾಗೂ ವಸತಿ ನಿಲಯಗಳಿಗೆ ಜನವರಿ 4 ರಿಂದ 7ರವರೆಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನ ಮೂರ್ತಿ ತಿಳಿಸಿದ್ದಾರೆ.

ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ವಸತಿ ವ್ಯವಸ್ಥೆ ಮಾಡಿರುವ ಶಾಲಾ-ಕಾಲೇಜುಗಳಿಗೆ ಜ.4 ಮತ್ತು 5 ರಂದು ಹೆಚ್ಚುವರಿ ರಜೆ ಘೋಷಿಸಲಾಗಿದೆ. ಐದು ಪದವಿ ಪೂರ್ವ ಕಾಲೇಜು ಹಾಗೂ ಶಾಲೆಗಳು ಹಾಗೂ ವಿವಿಧ ವಸತಿ ಶಾಲೆಗಳು ಸೇರಿ 67 ಶಾಲೆಗಳು ಜನವರಿ 4 ರಿಂದ 7ರವರೆಗೆ ರಜೆ ಘೋಷಿಸಲಾಗಿದೆ.

ಜ.8 ಭಾನುವಾರ ಆಗಿರುವುದರಿಂದ ಸಾರ್ವತ್ರಿಕ ರಜೆ ಇದೆ. ವಸತಿ ವ್ಯವಸ್ಥೆ ಮಾಡಿರುವ ಹಾವೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪದವಿ ಪೂರ್ವ ಕಾಲೇಜ್, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಎಸ್.ಎಂ.ಎಸ್. ಪದವಿ ಪೂರ್ವ ಕಾಲೇಜು, ಎಸ್.ಜೆ.ಎಂ.ಪದವಿ ಪೂರ್ವ ಕಾಲೇಜುಗಳಿಗೆ ಜ.4 ರಿಂದ 8ರವರೆಗೆ ಪದವಿ ಪೂರ್ವ ಶಿಕ್ಷಣ ಜಂಟಿ ನಿರ್ದೇಶಕರು ರಜೆ ಘೋಷಿಸಿದ್ದಾರೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರು ಕೂಡ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಹಾವೇರಿ ಜಿಲ್ಲೆಯ ಎಲ್ಲ ಪದವಿ ಪೂರ್ವ ಕಾಲೇಜುಗಳಿಗೆ ಜ.6 ಮತ್ತು 7 ರಂದು ರಜೆ ಘೋಷಿಸಲಾಗಿದೆ.

ಸದರಿ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರು, ಇತರ ಸಿಬ್ಬಂದಿಗಳು ಈ ಸಮ್ಮೇಳನದಲ್ಲಿ ಭಾಗವಹಿಸುವುದನ್ನು ಅನ್ಯಕಾರ್ಯದ ನಿಮಿತ್ತ (ಒಒಡಿ) ಎಂದು ಪರಿಗಣಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT