ಬುಧವಾರ, ಸೆಪ್ಟೆಂಬರ್ 30, 2020
27 °C

ಎಂಇಎಸ್‌ ಸಂಘಟನೆ ನಿಷೇಧಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಾಗ ಕನ್ನಡಿಗರ ಮೇಲೆ ಹಾಗೂ ಪೊಲೀಸ್‌ ಇಲಾಖೆಯವರ ಮೇಲೆ ದಾಂದಲೆ ಮಾಡಿದ ಎಂ.ಇ.ಎಸ್ ಸಂಘಟನೆಯನ್ನು ನಮ್ಮ ರಾಜ್ಯದಲ್ಲಿ ನಿಷೇಧ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣಕುಮಾರ ಶೆಟ್ಟಿ ಬಣ) ಹಾವೇರಿ ತಾಲ್ಲೂಕು ಘಟಕದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. 

ದಾಂಧಲೆ ಮಾಡಿದ ಪುಂಡರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಗಡಿ ಪಾರು ಮಾಡಬೇಕು ಎಂದು ಒತ್ತಾಯಿಸಿದರು. 

ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ಫಕ್ಕೀರೇಶ ಕಟ್ಟಿಮನಿ, ಜಿಲ್ಲಾ ಕಾರ್ಯಾಧ್ಯಕ್ಷ ನೂರ್‌ ಅಹಮದ್ ಲಕ್ಷ್ಮೇಶ್ವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾರುತಿ ಹಾಲಗಿ, ಮಹದೇವಪ್ಪ ಹೆಡಿಗ್ಗೊಂಡ, ಅನಸೂಯಾ ಸಿದ್ದಪ್ಪಳವರ, ಕೃಷ್ಟಪ್ಪ ನಾಗಜ್ಜಿ, ಹನಮಂತ ಭೋವಿ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.