ಊರುಗಳ ಹೆಸರು ಬದಲಾವಣೆಗೆ ವಿರೋಧ

ಹಾವೇರಿ: ಕನ್ನಡದ ಊರುಗಳ ಹೆಸರುಗಳನ್ನು ಮಲಯಾಳಂ ಭಾಷೆಗೆ ರೂಪಾಂತರಿಸುವ ಪ್ರಕ್ರಿಯೆಯನ್ನು ಕೇರಳ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು.
ದೇವಗಿರಿ ಜಿಲ್ಲಾಡಳಿತ ಭವನಕ್ಕೆ ತೆರಳಿದ ಕರವೇ ಮುಖಂಡರು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಕರವೇ ಮುಖಂಡ ಫಕ್ಕೀರೇಶ ಎಂ. ಕಟ್ಟೀಮನಿ ಮಾತನಾಡಿ, ‘ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಭಾವನಾತ್ಮಕ ಸಂಬಂಧವಿದೆ. ಸಾವಿರಾರು ಕನ್ನಡಿಗರು ಅಲ್ಲಿಯೇ ನೆಲೆಸಿದ್ದಾರೆ. ಊರುಗಳ ಹೆಸರನ್ನು ಬದಲಾವಣೆ ಮಾಡುವ ಮೂಲಕ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖಂಡರಾದ ಮಾರುತಿ ಹಾಲಿಗೆ, ಪುಟ್ಟಪ್ಪ ಹಿತ್ತಲಮನಿ, ಗುರುರಾಜ್ ಗೊಜನೂರು, ರೇಣುಕಾ ಬಡಕ್ ಅಣ್ಣನವರ, ಲತಾ ಪಾಟೀಲ್, ಯಶೋದಾ ಅಮ್ಮನವರ, ಶರಣಪ್ಪ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.