ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಪೊಲೀಸ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ 

Published 19 ಮಾರ್ಚ್ 2024, 15:09 IST
Last Updated 19 ಮಾರ್ಚ್ 2024, 15:09 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾನ್‌ಸ್ಟೆಬಲ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಯ ಬಸವೇಶ್ವರನಗರ ಸಿ ಬ್ಲಾಕ್ ರೈಲ್ವೆ ಹಳಿ ಸಮೀಪ ಮಂಗಳವಾರ ನಡೆದಿದೆ.

ಈರಣ್ಣ ದೊಡ್ಡಬೂದಿಹಾಳ (47) ಆತ್ಮಹತ್ಯೆ ಮಾಡಿಕೊಂಡವರು. ಎರಡು ದಿನಗಳ ಹಿಂದೆ ಮನೆಯಿಂದ ವಾಯುವಿಹಾರಕ್ಕೆ ಹೋಗಿದ್ದ ಇವರು ಮರಳಿ ಬಂದಿರಲಿಲ್ಲ. ನಾಪತ್ತೆಯಾಗಿರುವ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇವರು ಮೂಲವ್ಯಾಧಿ ಮತ್ತು ಮಧುಮೇಹದಿಂದ ಬಳಲುತ್ತಿದ್ದರು. ಮೃತದೇಹದ ಬಳಿ ಮಾತ್ರೆಗಳು ಸಿಕ್ಕಿದ್ದು, ಅನಾರೋಗ್ಯದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT