ಶುಕ್ರವಾರ, ಜನವರಿ 27, 2023
21 °C

ಮೀರ್‌ಸಾಧಿಕ್‌ರಿಂದ ರಕ್ಷಣೆಗಾಗಿ ಸಿಡಿ ಬಿಡುಗಡೆಗೆ ಸ್ಟೇ ತಂದೆವು: ಬಿ.ಸಿ.ಪಾಟೀಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ‘ನಾವ್ಯಾರು ವ್ಯಭಿಚಾರ ಮಾಡಿಲ್ಲ. ಆದರೆ, ನಮಗೆ ಕೆಟ್ಟ ಹೆಸರು ತರಲು ಸಿ.ಡಿ ಬಿಡುಗಡೆ ಮಾಡಿದರೆ, ಒಮ್ಮೆ ಹೋದ ಮಾನ ಮತ್ತೆ ಬರುವುದಿಲ್ಲ. ಮೀರ್‌ಸಾಧಿಕ್‌ ಮತ್ತು ನಂಬಿಕೆದ್ರೋಹಿಗಳಿಂದ ರಕ್ಷಣೆ ಅಗತ್ಯವಾದ್ದರಿಂದ ಸಿಡಿ ಬಿಡುಗಡೆಗೆ ತಡೆಯಾಜ್ಞೆ ತರಲಾಗಿತ್ತು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು. 

ಸಿ.ಡಿ. ಬಿಡುಗಡೆಗೆ ಯಾಕೆ ಕೋರ್ಟ್‌ನಲ್ಲಿ ಸ್ಟೇ ತಂದರು ಎಂಬ ಬಣಕಾರ್‌ ಹೇಳಿಕೆಗೆ ಹಿರೇಕೆರೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ಮೀರ್ ಸಾಧಿಕ್‌ರಂಥ ಜನ ನಮ್ಮ ಸುತ್ತಮುತ್ತಲೇ ಇರುತ್ತಾರೆ. ಇದೇ ಬಣಕಾರ್ ನಮ್ಮ ಜೊತೆಗೆ ಇದ್ದು, ಈಗ ಕಾಂಗ್ರೆಸ್ ಸೇರಿದ್ದಾರೆ. ರಮೇಶ್ ಜಾರಕಿಹೊಳಿಯವರ ಬಗ್ಗೆ ಅನವಶ್ಯಕವಾಗಿ ಸಿಡಿ ಬಿಡುಗಡೆ ಮಾಡಿದರು. ಆದರೆ ಏನಾಯ್ತು? ಬಿ ರಿಪೋರ್ಟ್ ಆಯ್ತು. ನಾವು ನಮ್ಮ ಗೌರವ ರಕ್ಷಿಸಿಕೊಳ್ಳುವ ಕೆಲಸ ಮಾಡಲೇಬೇಕು. ಸ್ಟೇ ಅವಧಿ ಹಿಂದೆಯೇ ಮುಗಿದಿದೆ. ನಂತರವಾದರೂ ಸಿಡಿ ಬಿಡುಗಡೆ ಮಾಡಬಹುದಿತ್ತಲ್ಲ ಎಂದರು. 

‘ಯು.ಬಿ.ಬಣಕಾರ ಅವರ ಧಮ್‌, ತಾಕತ್ತನ್ನು ಮೂರು ಬಾರಿ ನೋಡಿ ಆಗಿದೆ. ನನಗೆ ಧಮ್ ಇರೋದಕ್ಕೆ ಅವರಿಗೆ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ, ಒಂದು ಕಾರು, ರಾಜ್ಯ ಸಚಿವ ದರ್ಜೆ ಸ್ಥಾನಮಾನ ಬಂದಿತ್ತು. ಧಮ್‌, ತಾಕತ್ತಿನ ಮೇಲೆ ಚುನಾವಣೆ ನಡೆಯಲ್ಲ, ಅಭಿವೃದ್ಧಿ ಮೇಲೆ ಚುನಾವಣೆ ನಡೆಯುತ್ತದೆ. ಅವರು ಏನು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಪುಸ್ತಕ ಬಿಡುಗಡೆ ಮಾಡಲಿ. ಆಗ ಒಪ್ಪಿಕೊಳ್ಳುತ್ತೇನೆ’ ಎಂದು ಸವಾಲು ಹಾಕಿದರು. 

ನಾವು 17 ಮಂದಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ, ಬಿಜೆಪಿ ಸರ್ಕಾರ ರಚನೆಯಾಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ಸಿಕ್ಕಿತು. ಇದಕ್ಕಾಗಿ ಅವರು ನಮಗೆ ಅಭಿನಂದನೆ ತಿಳಿಸಬೇಕು ಎಂದು ಸಿದ್ದರಾಮಯ್ಯನವರ ಟೀಕೆಗೆ ಪ್ರತ್ಯುತ್ತರ ನೀಡಿದರು.


ಹಾವೇರಿ ಜಿಲ್ಲೆ ಹಿರೇಕೆರೂರು ಮತ್ತು ರಟ್ಟೀಹಳ್ಳಿ ತಾಲ್ಲೂಕಿನ ₹461 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರೇಕೆರೂರು ಪಟ್ಟಣಕ್ಕೆ ಆಗಮಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ, ಸಂಸದ ಶಿವಕುಮಾರ ಉದಾಸಿ, ಶಾಸಕ ನೆಹರು ಓಲೇಕಾರ ಇದ್ದಾರೆ

ಓದಿ... 

ಆಲಿ ಬಾಬಾ ಮತ್ತು 40 ಕಳ್ಳರ ಸರ್ಕಾರ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆ 

ಸಿದ್ದರಾಮಯ್ಯ ಮಾಡಿದ ಪಾಪದ ಕೆಲಸದಿಂದಲೇ ನಾನು ಕಾಂಗ್ರೆಸ್‌ ಬಿಟ್ಟು ಬಂದೆ: ಸುಧಾಕರ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು