ಹಾವೇರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲ್ಲೂಕಿನಲ್ಲಿ ₹62 ಕೋಟಿ ವೆಚ್ಚದ 9 ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶನಿವಾರ ಉದ್ಘಾಟಿಸಿದರು. ₹11 ಕೋಟಿ ವೆಚ್ಚದ 2 ಅಭಿವೃದ್ಧಿ ಕಾಮಗಾರಿಗಳಿಗೆ ರಾಣೆಬೆನ್ನೂರಿನ ಎಪಿಎಂಸಿ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು.

ಅಮೃತ ಯೋಜನೆಯಡಿ ₹14 ಕೋಟಿ ವೆಚ್ಚದಲ್ಲಿ 24X7 ಕುಡಿಯುವ ನೀರಿನ ಯೋಜನೆಯನ್ನು ಎಪಿಎಂಸಿ ಮಾರುಕಟ್ಟೆ ಸಮುದಾಯ ಭವನ ಆವರಣದಲ್ಲಿ ಲೋಕಾರ್ಪಣೆಗೊಳಿಸಿದರು.

ಓದಿ:ಜಾತಿಗಣತಿ ಬಗ್ಗೆ ಮೊದಲು ಆಕ್ಷೇಪಿಸಿದ್ದೇ ಕಾಂಗ್ರೆಸ್: ಸಿದ್ದರಾಮಯ್ಯಗೆ ಬಿಜೆಪಿ

ತಾಲ್ಲೂಕಿನ ಕೊಪ್ಪೇಲೂರು ಗ್ರಾಮದಲ್ಲಿ ನಬಾರ್ಡ್ ಯೋಜನೆಯಡಿ ₹1.70 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ₹93 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಕೊಠಡಿ, ₹62 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಕಟ್ಟಡ, ಅರೆಮಲ್ಲಾಪೂರ ಕರ್ನಾಟಕ ಪಬ್ಲಿಕ್ ಶಾಲೆಯ ಮೂಲಸೌಕರ್ಯಗಳಡಿ ₹ 2 ಕೋಟಿ ವೆಚ್ಚದಲ್ಲಿ ಹೆಚ್ಚುವರಿ ಮೂಲಸೌಕರ್ಯ ಕಲ್ಪಿಸುವ ಕಾಮಗಾರಿಗಳಿಗೆ ಶಿಲಾನ್ಯಾಸ ಮಾಡಿದರು. ₹ 49.50 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ರೈತ ಸಂಪರ್ಕ ಕೇಂದ್ರ, ₹50 ಲಕ್ಷ ವೆಚ್ಚದಲ್ಲಿ ನವೀಕರಿಸಿರುವ ನಗರಸಭೆ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣವನ್ನು ಉದ್ಘಾಟಿಸಿದ ಅವರು, ನಗರಸಭೆ ₹5 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ದ್ವಿಭಜಕ ರಸ್ತೆ, ಚರಂಡಿ ನಿರ್ಮಾಣ, ವಿದ್ಯುತ್ ಕಂಬ ಸೇರಿದಂತೆ ವಿವಿಧ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು.

₹6.36 ಕೋಟಿ ವೆಚ್ಚದಲ್ಲಿ ಸಮುದಾಯ ಭವನ, ದೊಡ್ಡಕೆರೆ ಹಾಗೂ ಕಮದೋಡ, ಚಳಗೇರಿ ಹಾಗೂ ಕರೂರ ಕೆರೆಗಳಿಗೆ ನೀರು ತುಂಬಿಸುವ ₹32.50 ಕೋಟಿ ವೆಚ್ಚದ ಕಾಮಗಾರಿಯ ಉದ್ಘಾಟನೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

₹9 ಕೋಟಿ ವೆಚ್ಚದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಕರೂರ, ಚಳಗೇರಿ, ಅರೆಮಲ್ಲಾಪುರ ಹಾಗೂ ಕವಲೂರು ಗ್ರಾಮಗಳಿಗೆ ನಲ್ಲಿ ನೀರು ಸಂಪರ್ಕ ಕಾಮಗಾರಿಯನ್ನು ಉದ್ಘಾಟಿಸಿದರು.

ಓದಿ:ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ಮೈಸೂರಿಗೆ ಕರೆತಂದ ಪೊಲೀಸರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.