ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ 8 ಹಾಗೂ 9ನೇ ಘಟಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ಆರು ಜನರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲು ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಹಾವೇರಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕುಲಪತಿ ಪ್ರೊ ಟಿ.ಎಂ. ಭಾಸ್ಕರ್, 'ಡಿಸೆಂಬರ್ 2ರಂದು ಘಟಿಕೋತ್ಸವ ಹಮ್ಮಿಕೊಳ್ಳಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಪದವಿ ಪ್ರದಾನ ಮಾಡಲಿದ್ದಾರೆ' ಎಂದರು.

'ಜನಪದ ಕ್ಷೇತ್ರಕ್ಕೆ ಸೇವೆ ಸಲ್ಲಿಸಿದ ಡಾ. ಹನುಮಂತಪ್ಪ ಗೋವಿಂದಪ್ಪ ದಡ್ಡಿ, ಶಾಂತಿ ನಾಯಕ, ಹಾಸನ ರಘು, ಜ್ಯೋತಿರ್ಲಿಂಗ ಹೊನ್ನಕಟ್ಟಿ, ಎಸ್.ಸಿ. ಶರ್ಮಾ ಹಾಗೂ ಸಿದ್ದರಾಮ ಹೊನ್ನಕಲ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ. ಇದರ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ 16 ಚಿನ್ನದ ಪದಕ ನೀಡಲಾಗುತ್ತಿದೆ' ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.