ಹಾವೇರಿ: ‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಕುರ್ಚಿ ಕಿತ್ತಾಟ ಜೋರಾಗಿದೆ. ಇದು ಹೀಗೆ ಮುಂದುವರಿದರೆ, ರಾಜ್ಯದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಬಹುದು’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಕೇಂದ್ರದ ನಾಯಕರು ಕುರ್ಚಿ ಕಿತ್ತಾಟವನ್ನು ಬಗೆಹರಿಸಲು ಎರಡು–ಮೂರು ಸೂತ್ರ ತಿಳಿಸಿದರೂ, ಇಬ್ಬರೂ ನಾಯಕರು ಒಪ್ಪುತ್ತಿಲ್ಲ. ಇಬ್ಬರನ್ನೂ ಬಿಟ್ಟು, ಬೇರೆ ಸೂತ್ರ ತಯಾರು ಮಾಡುವ ಮಾಹಿತಿ ಇದೆ. ಇಬ್ಬರ ಜಗಳದಲ್ಲಿ ಡಾರ್ಕ್ ಹಾರ್ಸ್ ರೇಸ್ಗೆ ಬರುವ ಸಾಧ್ಯತೆ ಇದೆ’ ಎಂದರು.

‘ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದೆ. ಕಾಂಗ್ರೆಸ್ ಹೈಕಮಾಂಡ್ ಅಸಹಾಯಕವಾಗಿದೆ. ರಾಜ್ಯದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇಬ್ಬರೂ ನಾಯಕರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಜಗಳ ಮುಂದುವರಿದರೆ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಈಗ ಕಾಣದಿರುವ ಕುದುರೆಯೂ ದೊಡ್ಡದಾಗಿ ಕಾಣಬಹುದು’ ಎಂದರು.

ಅವಿಶ್ವಾಸ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಚಳಿಗಾಲ ಅಧಿವೇಶನಕ್ಕೆ ಡಿಸೆಂಬರ್ 8ರವರೆಗೂ ಸಮಯವಿದೆ. ಅಂತಹ ಸಂದರ್ಭ ಬಂದರೆ, ಅವಿಶ್ವಾಸ ನಿರ್ಣಯ ಮಂಡಿಸುವ ಪ್ರಸಂಗವೂ ಬರಬಹುದು’ ಎಂದರು.

‘ಕುದುರೆ ವ್ಯಾಪಾರ ಮಾಡುವುದು ಬಿಜೆಪಿಯವರ ಕೆಲಸ’ ಎಂದು ಸಚಿವ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಕಾಂಗ್ರೆಸ್ನವರು 1969ರಿಂದಲೇ ಕುದುರೆ ವ್ಯಾಪಾರ ಆರಂಭ ಮಾಡಿದ್ದಾರೆ. ಆಗ ಜಾರಕಿಹೊಳಿಯವರು ಇನ್ನೂ ರಾಜಕಾರಣದಲ್ಲಿ ಇರಲಿಲ್ಲ. ಕಾಂಗ್ರೆಸ್ ಇತಿಹಾಸ ತೆಗೆದು ನೋಡಿದರೆ ಗೊತ್ತಾಗಲಿದೆ. ಮಹಾರಾಷ್ಟ್ರದ ಎಲ್ಲ ಶಾಸಕರನ್ನು ಡಿ.ಕೆ. ಶಿವಕುಮಾರ ಅವರೇ ಕರೆದುಕೊಂಡು ಬಂದು, ವಿಲಾಸ್ ರಾವ್ ದೇಶಮುಖ ಅವರನ್ನು ನಿಯಂತ್ರಣದಲ್ಲಿ ಇಟ್ಟುಕೊಂಡಿರುವುದು ಎಲ್ಲರಿಗೂ ಗೊತ್ತಿದೆ’ ಎಂದರು.

ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ‘ಮೆಕ್ಕೆಜೋಳ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಸುಖಾಸುಮ್ಮನೇ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ದುಡ್ಡಿಲ್ಲ. ಮುಖ್ಯಮಂತ್ರಿಯವರು 10 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲು ಆದೇಶ ಮಾಡಿದ್ದಾರೆ. ಆದೇಶವಾದರೂ ಏಕೆ ಖರೀದಿ ಮಾಡಿಲ್ಲ. ಏಕೆ ಏಜೆನ್ಸಿ ನಿಗದಿ ಮಾಡಿಲ್ಲ. ಏಕೆ ಹಣ ಬಿಡುಗಡೆ ಮಾಡಿಲ್ಲ’ ಎಂದು ಬೊಮ್ಮಾಯಿ ಪ್ರಶ್ನಿಸಿದರು.

‘ರಾಜ್ಯ ಸರ್ಕಾರ, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವ ಕುರಿತು ಸಚಿವ ಶಿವಾನಂದ ಪಾಟೀಲ ಅವರು ಹೇಳಿದ್ದಾರೆ. ನಿಯೋಗ ತೆಗೆದುಕೊಂಡು ಹೋಗಿ ಏನು ಮಾಡುವುದು. ಅವರು ಮೊದಲು ಖರೀದಿ ಆರಂಭಿಸಲಿ. ನಾನು ಅವರ ಜಾಗದಲ್ಲಿ ಇದ್ದಿದ್ದರೆ ಅದೇ ಕಲಸ ಮಾಡುತ್ತಿದ್ದೆ’ ಎಂದು ಹೇಳಿದರು.

‘ಬೇಡ್ತಿ–ವರದಾ ನದಿ ಜೋಡಣೆಗೆ ಸ್ಪಂದನೆ’

‘ರೈತರಿಗೆ ನೀರಾವರಿ ಹಾಗೂ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆಗೆ ಅನುಕೂಲವಾಗಿರುವ ಬೇಡ್ತಿ–ವರದಾ ನದಿ ಜೋಡಣೆ ಯೋಜನೆ ಜಾರಿಗೆ ಕೇಂದ್ರ ಸರ್ಕಾರವು ಡಿಪಿಆರ್ ಮಾಡಲು ಅನುಮತಿ ನೀಡಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ‘ರಾಜ್ಯ ಸರ್ಕಾರ ಡಿಪಿಆರ್ ಸಿದ್ಧತೆಗೆ ಕ್ರಮ ಕೈಗೊಳ್ಳುತ್ತಿದೆ. ಡಿಪಿಆರ್ ಕೇಂದ ಸರ್ಕಾರಕ್ಕೆ ಹೋದ ತಕ್ಷಣ ಅನುಮತಿ ಕೊಡಿಸುವ ಕೆಲಸ ಮಾಡುತ್ತೇನೆ. ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದರು. ‘ನದಿ ಜೋಡಣೆಯನ್ನು ವಿರೋಧಿಸಿ ಯಾರೋ ನಾಲ್ಕು ಜನ ಬಂದು ಮನವಿ ಕೊಟ್ಟರೆ ಮುಖ್ಯಮಂತ್ರಿಯವರು ಸ್ಪಂದಿಸಬಾರದು. ಈ ರಾಜ್ಯದ ನೀರಿನ ಸಂಪತ್ತು ಎಲ್ಲರಿಗೂ ಸೇರಿದ್ದು. ಕೃಷ್ಣಾ ನದಿ ಮಹಾರಾಷ್ಟ್ರದಲ್ಲಿ ಹುಟುತ್ತದೆ. ಮಹಾರಾಷ್ಟ್ರದವರೇ ಇಟ್ಟುಕೊಳ್ಳಲು ಆಗುತ್ತದೆಯೇ ? ಉತ್ತರ ಕನ್ನಡದ ನಿಸರ್ಗಕ್ಕೆ ತೊಂದರೆಯಾಗದಂತೆ ಯಾವುದೇ ಮುಳುಗಡೆಯಾಗದಂತೆ ಯೋಜನೆ ಜಾರಿ ಮಾಡಲಾಗುವುದು. ಅವರ ಮನವಿಗೆ ಮುಖ್ಯಮಂತ್ರಿ ಯಾವುದೇ ರೀತಿಯ ಸ್ಪಂದನೆ ಮಾಡಬಾರದು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.