ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ರಕ್ಷಣಾ ವೇದಿಕೆ ಸಮಾವೇಶ ಜ.27ರಂದು

ರಾಯಣ್ಣನವರ ಹುತಾತ್ಮ ದಿನಾಚರಣೆ ಮತ್ತು ಜನಪದ ಸಂಭ್ರಮ ಆಯೋಜನೆ
Last Updated 24 ಜನವರಿ 2021, 8:39 IST
ಅಕ್ಷರ ಗಾತ್ರ

ಹಾವೇರಿ: ‘ಬೆಳಗಾವಿ ವಿಭಾಗ ಮಟ್ಟದ ಕರ್ನಾಟಕ ರಕ್ಷಣಾ ವೇದಿಕೆಯ ಸಮಾವೇಶ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 190ನೇ ಹುತಾತ್ಮ ದಿನಾಚರಣೆ ಹಾಗೂ ‘ಜನಪದ ಸಂಭ್ರಮ’ ಕಾರ್ಯಕ್ರಮವನ್ನು ಗದಗ ಜಿಲ್ಲೆಯ ಗಜೇಂದ್ರಗಡದಲ್ಲಿ ಜ.27ರಂದು ಸಂಜೆ 6 ಗಂಟೆಗೆ ಹಮ್ಮಿಕೊಳ್ಳಲಾಗಿದೆ’ ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಸತೀಶಗೌಡ್ರು ಮುದಿಗೌಡ್ರು ಹೇಳಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಗಜೇಂದ್ರಗಡ ಮೈಸೂರು ಮಠದ ವಿಜಯ ಮಹಾಂತ ಸ್ವಾಮೀಜಿ, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಹುಲಿಜಂತಿಪಟ್ಟದ ಮಹಾಲಿಂಗರಾಯ ಮಹಾರಾಜರು, ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ಗಜೇಂದ್ರಗಡದ ಹಜರತ್‌ ನಿಜಾಮುದ್ದಿನ್‌ಷಾ ಆರ್ಷಪಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸಮಾವೇಶವನ್ನು ಉದ್ಘಾಟಿಸಲಿದ್ದು, ಕರವೇ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ್ರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಎಚ್‌.ಕೆ.ಪಾಟೀಲ, ಮಾಜಿ ಶಾಸಕರಾದ ಜಿ.ಎಸ್‌. ಪಾಟೀಲ, ವಿಜಯಾನಂದ ಕಾಶಪ್ಪನವರ್‌, ಕರವೇ ಮಹಿಳಾ ರಾಜ್ಯ ಘಟಕದ ಉಪಾಧ್ಯಕ್ಷೆ ಅಶ್ವಿನಿ ಗೌಡ, ಕರವೇ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಎಸ್‌.ಸೋಂಪುರ ಭಾಗವಹಿಸಲಿದ್ದಾರೆ.

‘ಟಿ.ಎ.ನಾರಾಯಣಗೌಡರ ಕುರಿತಾದ ಕನ್ನಡ ಸಾಮ್ರಾಟ್‌ ಸಿ.ಡಿ. ಬಿಡುಗಡೆಯಾಗಲಿದೆ. ವಿವಿಧ ಕ್ಷೇತ್ರಗಳ ಸಾಧಕರಿಗೆ ಸಂಗೊಳ್ಳಿರಾಯಣ್ಣ ಗೌರವ ಪುರಸ್ಕಾರ ಪ್ರದಾನ ಮಾಡಲಾಗುವುದು. ಜನಪದ ಸಂಭ್ರಮ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಸಂಗೊಳ್ಳಿ ರಾಯಣ್ಣವನವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯಿಂದ ಮೂರು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದು, ಮಹಿಳಾ ಘಟಕದಿಂದ ಸುಮಾರು 300 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಯಶವಂತಗೌಡ, ಹಾಲೇಶ್ ಹಾಲಣ್ಣನವರ್‌, ಪರಶುರಾಮ್‌, ಶೋಭಾ ಹೊನ್ನಳ್ಳಿ, ಟಿಪ್ಪು ಸುಲ್ತಾನ್‌ ಮಕಂದಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT