ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣಾ ಸುದ್ದಿಗಳ ಮೇಲೆ ನಿಗಾವಹಿಸಲು ಸೂಚನೆ

ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ: ಜಿಲ್ಲಾಧಿಕಾರಿ ಸೂಚನೆ
Last Updated 2 ಜೂನ್ 2022, 13:56 IST
ಅಕ್ಷರ ಗಾತ್ರ

ಹಾವೇರಿ: ‘ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸಲು ಈಗಾಗಲೇ ಜಿಲ್ಲಾ ಮಟ್ಟದಲ್ಲಿ ರಚಿಸಲಾದ ವಿವಿಧ ಸಮಿತಿಗಳು ಚುರುಕಿನಿಂದ ಕಾರ್ಯನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ-2022ಕ್ಕೆ ಸಂಬಂಧಿಸಿದಂತೆ ನೀತಿ ಸಂಹಿತೆ ಅನುಷ್ಠಾನ ಕುರಿತು ಜರುಗಿದ ಸಭೆಯಲ್ಲಿ ಮಾತನಾಡಿದ ಅವರು, ಪ್ರತಿ ದಿನ ಪತ್ರಿಕೆಗಳಲ್ಲಿ, ವಿದ್ಯುನ್ಮಾನ ಹಾಗೂ ಸಾಮಾಜಿಕ ಜಾಲತಣಗಳಲ್ಲಿ ಬಿತ್ತರವಾಗುವ ಚುನಾವಣಾ ಸುದ್ದಿಗಳ ಮೇಲೆ ನಿಗಾವಹಿಸಬೇಕು. ಪ್ರತಿ ವರದಿಯನ್ನು ಸರಿಯಾಗಿ ನಮೂದಿಸಿ ನಿಗದಿತ ಅವಧಿಯೊಳಗೆ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು ಎಂದು ಸೂಚಿಸಿದರು.

ಶಿಕ್ಷಕರು ಚುನಾವಣಾ ಪ್ರಚಾರ ಮಾಡುವಂತಿಲ್ಲ. ಎಂ.ಸಿ.ಸಿ ಹಾಗೂ ಪ್ಲೈಯಿಂಗ್ ಟೀಮ್ ಬಹಳ ಚುರುಕಿನಿಂದ ಕಾರ್ಯನಿರ್ವಹಿಸಬೇಕು. ಚುನಾವಣೆ ಕುರಿತು ಯಾವುದೇ ದೂರುಗಳು ಬಂದರೆ ನಮ್ಮ ಗಮನಕ್ಕೆ ತರಬೇಕು. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಅಧಿಕಾರಿ ಹಾಗೂ ಸಿಬ್ಬಂದಿ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಕಂಪ್ಲೇಂಟ್ ಮಾನಿಟರಿಂಗ್ ಸೆಲ್ ಅಧಿಕಾರಿ ಕೃಷಿ ಉಪ ನಿರ್ದೇಶಕ ಹುಲಿರಾಜ, ಜಿಲ್ಲಾ ಮಟ್ಟದ ಮಾದರಿ ನೀತಿಸಂಹಿತೆ ಅನುಷ್ಠಾನ ಸಮಿತಿ ನೋಡಲ್ ಅಧಿಕಾರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪಲ್ಲವಿ ಸಾತೇನಹಳ್ಳಿ, ಅಬಕಾರಿ ಸಮಿತಿ ಅಧಿಕಾರಿ ಅಬಕಾರಿ ಇಲಾಖೆ ಉಪ ಆಯುಕ್ತರಾದ ಟಿ.ವಿ.ಶೈಲಜಾ, ಡಿಎಚ್‌ಒ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ವರದಿ ಸಮಿತಿ ನೋಡಲ್ ಅಧಿಕಾರಿ ಪ್ರದೀಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT