ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ವೈದ್ಯ ವಿದ್ಯಾರ್ಥಿನಿ ಕೊಲೆ ಆರೋಪಿಗೆ ಶಿಕ್ಷೆಯಾಗಲಿ’

Published : 17 ಆಗಸ್ಟ್ 2024, 15:55 IST
Last Updated : 17 ಆಗಸ್ಟ್ 2024, 15:55 IST
ಫಾಲೋ ಮಾಡಿ
Comments

ಬ್ಯಾಡಗಿ: ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಖಂಡಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (ಐಎಂಎ) ಕರೆಯ ಮೇರೆಗೆ ಪಟ್ಟಣದ ತಾಲ್ಲೂಕು ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ಸೇವೆ ಸ್ಥಗಿತಗೊಳಿಸಿ ಶನಿವಾರ ವೈದ್ಯರು ಪ್ರತಿಭಟನೆ ನಡೆಸಿದರು.

ಐಎಂಎ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ಪ್ರಕಾಶ ಭಸ್ಮೆ ಮಾತನಾಡಿ, ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ನಡೆಯುತ್ತಿದ್ದರೂ ಅದಕ್ಕೆ ಕಡಿವಾಣ ಹಾಕಲು ಸರ್ಕಾರಗಳು ವಿಫಲವಾಗಿವೆ. ದೆಹಲಿ ನಿರ್ಭಯಾ ಪ್ರಕರಣ, ಹೈದರಾಬಾದ ಪಶುವೈದ್ಯೆ ಹತ್ಯೆ, ಉತ್ತರ ಪ್ರದೇಶದ ಹತ್ರಾಸ್ ಪ್ರಕರಣ, ಈಗ ಕೊಲ್ಕತ್ತಾದ ವೈದ್ಯ ವಿದ್ಯಾರ್ಥಿನಿಯ ಕೊಲೆ ಪ್ರಕರಣಗಳು ನಡೆದಿವೆ. ಇದರಿಂದ ವಿದ್ಯಾರ್ಥಿನಿಯರ ಬದುಕು ಅತಂತ್ರವಾಗಿದೆ. ಕೂಡಲೆ ಸರ್ಕಾರ ಅಪರಾಧಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.

ಐಎಂಎ ಕಾರ್ಯದರ್ಶಿ ಡಾ.ಎನ್.ಎಸ್. ನಿಡಗುಂದಿ ಮಾತನಾಡಿ, ಸಿ.ಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳು ನೇರ ಸಾಕ್ಷಿಯಾಗಿದ್ದು, ಆರೋಪಿಗಳನ್ನು ಹಿಡಿಯಲು ಪೊಲೀಸರಿಗೆ ಸಹಕಾರಿಯಾಗಲಿವೆ ಎಂದರು.

ಡಾ.ಮಹೇಶ ಮಾತನಾಡಿ, ಅತ್ಯಾಚಾರ ಪ್ರಕರಣದಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಅತ್ಯಾಚಾರದಂತಹ ವಿಚಾರದಲ್ಲಿ ಸಮಗ್ರವಾಗಿ ಯೋಚಿಸಿ ಆಡಳಿತಾತ್ಮಕ, ಕ್ರಾಂತಿಕಾರಕ ಬದಲಾವಣೆ ರೂಪಿಸದಿದ್ದರೆ ಇಂತಹ ಘಟನೆ ತಡೆಯುವುದು ಅಸಾಧ್ಯ. ಕೂಡಲೇ ಅಪರಾಧಿಗಳನ್ನು ಪತ್ತೆ ಹಚ್ಚಿ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದರು.

ಡಾ.ವಿರೇಶ ಹೊಸಮನಿ, ಡಾ.ಹರೀಶ, ಡಾ.ಚೇತನ, ಶುಶ್ರೂಷಕಿಯರಾದ ಸುಜಾತಾ, ಸೌಮ್ಯಾ, ಸುಮನ, ನಿರ್ಮಲಾ, ವಿದ್ಯಾ,ಕೆಂಚಮ್ಮ, ಶಿಲ್ಪಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT