ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌: ಇಬ್ಬರ ವಿರುದ್ಧ ಶಿಸ್ತುಕ್ರಮ

ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದರೆ ಸಹಿಸುವುದಿಲ್ಲ: ಅರವಿಂದ ಕೆ.ಬಿ.
Last Updated 6 ಮೇ 2022, 11:19 IST
ಅಕ್ಷರ ಗಾತ್ರ

ಹಾವೇರಿ: ‘ಕೆಆರ್‌ಎಸ್‌ ಪಕ್ಷ ನೀಡಿದ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡ ಕಾರಣ ರಾಣೆಬೆನ್ನೂರು ತಾಲ್ಲೂಕು ಘಟಕದ ಮರಳು ಹೋರಾಟ ಸಮಿತಿ ಅಧ್ಯಕ್ಷ ಕುಮಾರಸ್ವಾಮಿ ಪಾಟೀಲ ಮತ್ತು ಘಟಕದ ಉಪಾಧ್ಯಕ್ಷ ರುದ್ರಗೌಡ ಪಾಟೀಲ ಅವರನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ವಿಮುಕ್ತಗೊಳಿಸಲಾಗಿದೆ’ ಎಂದು ಕೆಆರ್‌ಎಸ್‌ ರಾಜ್ಯ ಕಾರ್ಯದರ್ಶಿ ಅರವಿಂದ ಕೆ.ಬಿ. ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಅಕ್ರಮ ಮರಳು ವಿಚಾರವಾಗಿ ಪೊಲೀಸರಿಗೆ ಹಾಗೂ ಸರ್ಕಾರದ ವಿವಿಧ ಇಲಾಖೆಗಳಿಗೆ ಕೊಟ್ಟ ದೂರು ವಿಚಾರಣೆ ಹಂತದಲ್ಲಿರುವಾಗಲೇ ರಾಜಿ ಮಾಡಿಕೊಂಡಿದ್ದು ಸರಿಯಲ್ಲ. ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ರಾಜ್ಯ ಸಮಿತಿ ಗಮನಕ್ಕೆ ತರದೇ ಕೆಲವು ಅಧಿಕಾರಿಗಳನ್ನು ಮತ್ತು ವ್ಯಕ್ತಿಗಳನ್ನು ಭೇಟಿ ಮಾಡಿದ್ದು ತಪ್ಪೆಂದು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘ರಾಜ್ಯದಲ್ಲಿ ಸ್ವಚ್ಛ, ಪ್ರಾಮಾಣಿಕ ಮತ್ತು ಜನಪರ ರಾಜಕಾರಣಕ್ಕಾಗಿ ಕೆಆರ್‌ಎಸ್‌ ಪಕ್ಷನಿರಂತರವಾಗಿ ಶ್ರಮಿಸುತ್ತಿದೆ. ನಮ್ಮ ಪಕ್ಷದ ಯಾವುದೇ ಪದಾಧಿಕಾರಿಗಳು ವ್ಯವಸ್ಥೆ ಅಥವಾ ವ್ಯಕ್ತಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ನಮ್ಮ ಧ್ಯೇಯೋದ್ದೇಶಗಳಿಗೆ ಧಕ್ಕೆ ತರುವ ಕೆಲಸಗಳಾದರೆ ಅಂಥವರ ವಿರುದ್ಧ ಶಿಸ್ತುಕ್ರಮ ಅನಿವಾರ್ಯ ಎಂದು ಹೇಳಿದರು.

ಜಿಲ್ಲೆಯಲ್ಲಿ ಅಕ್ರಮ ಮರಳು ಗಣಿಗಾರಿಕೆಯ ತನಿಖೆಯನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಇದಕ್ಕೆ ನಮ್ಮ ಪಕ್ಷದ ಪದಾಧಿಕಾರಿಗಳನ್ನು ಬಳಸಿಕೊಳ್ಳುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕೂಲಂಕಶವಾಗಿ ಪಾರದರ್ಶಕ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ದೂರು ನೀಡುತ್ತೇವೆ ಎಂದು ಮಾಹಿತಿ ನೀಡಿದರು.

ಮುಂಬರುವ ದಿನಗಳಲ್ಲಿ ಹಾವೇರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ ಸೇರಿದಂತೆ ಅಕ್ರಮ ಮದ್ಯ ತಯಾರಿಸುವಿಕೆ, ವೇಶ್ಯಾವಾಟಿಕೆ, ಮಟ್ಕಾದಂತಹ ಅಕ್ರಮಗಳ ವಿರುದ್ಧ ದೊಡ್ಡ ಮಟ್ಟದ ಕಾನೂನು ಹೋರಾಟ ಮತ್ತು ವಿನೂತನ ಪ್ರತಿಭಟನೆಗಳನ್ನು ನಡೆಸುತ್ತೇವೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಉಜಿಣೆಪ್ಪ ಕೋಡಿಹಳ್ಳಿ, ಮಹಿಳಾ ಘಟಕದ ಅಧ್ಯಕ್ಷೆ ಗಂಗಾ ಕೋರಿ, ಸೋಮನಗೌಡ ಗುದ್ದಿಯವರ, ಬಸವರಾಜ ಗೋಣೆಪ್ಪನವರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT