ಸೋಮವಾರ, ಜನವರಿ 18, 2021
23 °C
ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಬಿಎಸ್‌ವೈ ಪಂಚಮಸಾಲಿ ಸಮಾಜದ ಋಣ ತೀರಿಸಲಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮೇಲೆ ಲಿಂಗಾಯತ ಪಂಚಮಸಾಲಿ ಸಮಾಜದ ಋಣಭಾರವಿದೆ. ಈ ಋಣಭಾರ ತೀರಿಸುವ ಸುವರ್ಣಾವಕಾಶ ಈಗ ಅವರಿಗೆ ಸಿಕ್ಕಿದೆ. ಹಾಗಾಗಿ ನಮ್ಮ ಸಮಾಜಕ್ಕೆ ‘2ಎ’ ಮೀಸಲಾತಿ ಕಲ್ಪಿಸಬೇಕು’ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘20 ವರ್ಷಗಳಿಂದ ಶಾಂತಿಯುತವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ. ಪಾದಯಾತ್ರೆ ನಂತರ ಶಾಂತಿಯು ಕ್ರಾಂತಿಯಾಗುವ ಸಾಧ್ಯತೆ ಇದೆ. ಹಾಗಾಗಿ ಜ.14ರೊಳಗೆ ನಮ್ಮ ಬೇಡಿಕೆಗೆ ಸ್ಪಂದಿಸಬೇಕು. ಎರಡು ದಶಕದ ಕನಸನ್ನು ನನಸು ಮಾಡಬೇಕು ಎಂದು ಹೇಳಿದರು. 

ಜ.9ರಂದು ಸಚಿವ ಸಿ.ಸಿ.ಪಾಟೀಲ ಅವರ ನೇತೃತ್ವದ ನಿಯೋಗದೊಂದಿಗೆ ಪಂಚಮಸಾಲಿ ಮುಖಂಡರ ಚರ್ಚೆ ನಡೆಯಲಿದೆ. ಈ ಸಭೆಯ ನಿರ್ಣಯಗಳನ್ನು ನೋಡಿಕೊಂಡು ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು. ಜ.14ರಂದು ಕೂಡಲಸಂಗಮದಿಂದ ಬೆಂಗಳೂರಿನ ವಿಧಾನಸೌಧದವರೆಗೆ ‘ಪಂಚಲಕ್ಷ ಹೆಜ್ಜೆಗಳ ಐತಿಹಾಸಿಕ ಬೃಹತ್‌ ಪಾದಯಾತ್ರೆ’ ನಡೆಯಲಿದೆ. ಆಡಳಿತಾರೂಢ ಪಕ್ಷದ ಶಾಸಕರು, ಸಚಿವರು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನಮ್ಮ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು