ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ನೀಡಿದರೆ ಸತ್ಕಾರ, ಇಲ್ಲವೇ ಸತ್ಯಾಗ್ರಹ: ಬಸವಜಯ ಮೃತ್ಯುಂಜಯ ಶ್ರೀ

ಕೂಡಲಸಂಗಮದ ಬಸವಜಯ ಮೃತ್ಯುಂಜಯ ಶ್ರೀ ಹೇಳಿಕೆ
Last Updated 19 ಆಗಸ್ಟ್ 2022, 12:23 IST
ಅಕ್ಷರ ಗಾತ್ರ

ಹಾವೇರಿ: ಪಂಚಮಸಾಲಿ ಸಮುದಾಯಕ್ಕೆ ಆ.22ರೊಳಗೆ ‘2ಎ’ ಮೀಸಲಾತಿ ನೀಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸತ್ಕರಿಸುತ್ತೇವೆ, ಇಲ್ಲದಿದ್ದರೆ ಶಿಗ್ಗಾವಿಯ ರಾಣಿ ಚನ್ನಮ್ಮ ವೃತ್ತದಲ್ಲಿ ಸತ್ಯಾಗ್ರಹ ಹೋರಾಟವನ್ನು ಆರಂಭಿಸುತ್ತೇವೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಬೊಮ್ಮಾಯಿ ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ನಂಬಿಕೆ ಇದೆ. ಪದೇ ಪದೇ ಮಾತು ಕೊಟ್ಟು ಹೋರಾಟದ ಕಾವು ಕಡಿಮೆ ಮಾಡಲು ಸರ್ಕಾರ ಪ್ರಯತ್ನ ಮಾಡಬಾರದು. ಆಗದಿದ್ದರೆ ಆಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿ’ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ‘ಸಿಹಿ ಸುದ್ದಿ’ ತರಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಮತ್ತು ಸಚಿವ ಸಿ.ಸಿ. ಪಾಟೀಲ ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಆ.22ರ ಮಧ್ಯರಾತ್ರಿ 12 ಗಂಟೆಯವರೆಗೂ ಕಾಯುತ್ತೇವೆ. ಮೀಸಲಾತಿ ಘೋಷಣೆ ಮಾಡಿದಿದ್ದರೆ, ಆ.23ರಂದು ಹೋರಾಟಕ್ಕಿಳಿಯುತ್ತೇವೆ ಎಂದು ಎಚ್ಚರಿಕೆ ನೀಡಿದರು.

ವಾಲ್ಮೀಕಿ, ಹಾಲುಮತ (ಕುರುಬ) ಮತ್ತು ಪಂಚಮಸಾಲಿ ಈ ಮೂರು ಸಮುದಾಯಗಳಿಗೆ ಮೀಸಲಾತಿ ಕಲ್ಪಿಸಿದರೆ ಮಾತ್ರ ಬಿಜೆಪಿ ಪಕ್ಷ ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ‘ಮಿಷನ್‌ 150’ ಗುರಿ ಮುಟ್ಟುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT