ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಕಾರ್ಮಿಕರ ಕಾರ್ಡ್‌ ತಡೆಗೆ ಹೊಸ ಆ್ಯಪ್‌: ಸಂತೋಷ ಲಾಡ್‌

Published 5 ನವೆಂಬರ್ 2023, 23:30 IST
Last Updated 5 ನವೆಂಬರ್ 2023, 23:30 IST
ಅಕ್ಷರ ಗಾತ್ರ

ಹಾವೇರಿ: ‘ರಾಜ್ಯದಲ್ಲಿ ಶೇಕಡ 60ರಿಂದ 70ರಷ್ಟು ಕಾರ್ಮಿಕ ಕಾರ್ಡ್‌ಗಳು ನಕಲಿ ಕಾರ್ಡ್‌ಗಳಾಗಿದ್ದು ಅವುಗಳನ್ನು ತಡೆಯಲು ಹೊಸ ಆ್ಯಪ್‌ ಬಿಡುಗಡೆ ಮಾಡಲಾಗುತ್ತಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ಹಿರೇಕೆರೂರು ಪಟ್ಟಣದಲ್ಲಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 45 ಲಕ್ಷ ಕಾರ್ಮಿಕರು ಕಾರ್ಮಿಕ ಕಾರ್ಡ್‌ಗಳನ್ನು ಹೊಂದಿದ್ದಾರೆ. ಕಳೆದ ವರ್ಷದಲ್ಲಿ 39 ಲಕ್ಷ ಹೊಸ ಕಾರ್ಡ್‌ಗಳನ್ನು ವಿತರಿಸಲಾಗಿದೆ’ ಎಂದರು.

‘ನಕಲಿ ಕಾರ್ಡ್‌ಗಳನ್ನು ತಡೆಗಟ್ಟಲು ಕಾರ್ಮಿಕ ಸಂಘಟನೆಗಳ ಪಾತ್ರ ಮಹತ್ವದ್ದಾಗಿದ್ದು, ಅವರು ಸಲಹೆ, ಸೂಚನೆ ಹಾಗೂ ಸಹಾಯದಿಂದ ಅವುಗಳನ್ನು ತಡೆಹಿಡಿಯಲು ಸಾಧ್ಯ. ಕಾರ್ಮಿಕ ಕಾರ್ಯನಿರ್ವಹಿಸುವ ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲನೆ ಮಾಡಿ, ನೈಜ ಕಾರ್ಮಿಕರನ್ನು ಗುರುತಿಸಿ ಹೊಸ ಕಾರ್ಡ್ ವಿತರಿಸಲಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT