ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮದಗ–ಮಾಸೂರು ಕೆರೆ ಆಧುನೀಕರಣಕ್ಕೆ ₹ 59 ಕೋಟಿ’

Published 2 ಸೆಪ್ಟೆಂಬರ್ 2024, 15:45 IST
Last Updated 2 ಸೆಪ್ಟೆಂಬರ್ 2024, 15:45 IST
ಅಕ್ಷರ ಗಾತ್ರ

ರಟ್ಟೀಹಳ್ಳಿ: ತಾಲ್ಲೂಕಿನ ಮದಗ ಮಾಸೂರು ಕೆರೆಯ ಎಡದಂಡೆ ಹಾಗೂ ಬಲದಂತೆ ಕಾಲುವೆ ಆಧುನೀಕರಣಕ್ಕೆ ಕರ್ನಾಟಕ ನೀರಾವರಿ ನಿಗಮದ ಮಹತ್ವದ ಬಿ.ಆರ್.ಸಿ.ಯ 111ನೇ ಮಹತ್ವದ ಸಭೆಯಲ್ಲಿ ಮಂಜೂರಾತಿ ಪಡೆಯಲಾಗಿದ್ದು, ಶೀಘ್ರದಲ್ಲಿ ತಾಲ್ಲೂಕಿನಿಂದ ನಿಯೋಗ ತೆಗೆದುಕೊಂಡು ಹೋಗಿ ಮುಖ್ಯಮಂತ್ರಿಗಳ ಸಭೆಯಲ್ಲಿ ಮದಗ ಮಾಸೂರು ಕೆರೆಯ ಆಧುನೀಕರಣಕ್ಕೆ ₹59 ಕೋಟಿ ಮಂಜೂರಾತಿ ಪಡೆದು ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಯು.ಬಿ.ಬಣಕಾರ ತಿಳಿಸಿದರು.

ಅವರು ಸೋಮವಾರ ಬೆಳಿಗ್ಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ತಾಲ್ಲೂಕಿನ ಐತಿಹಾಸಿಕ ಮದಗ ಮಾಸೂರು ಕೆರೆಗೆ ಸೆ.3 ಬೆಳಿಗ್ಗೆ 11ಕ್ಕೆ ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ, ರಟ್ಟೀಹಳ್ಳಿ ಕಬ್ಬಿಣಕಂತಿಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ತಿಪ್ಪಾಯಿಕೊಪ್ಪ ಗುರುಮೂಕಪ್ಪ ಶಿವಯೋಗಿಗಳ ಮಠದ ಮಹಾಂತ ಸ್ವಾಮೀಜಿ ಹಾಗೂ ಅಸಂಖ್ಯಾತ ತಾಲ್ಲೂಕಿನ ಜನತೆಯೊಂದಿಗೆ ಬಾಗೀನ ಸಮರ್ಪಣೆ ಮಾಡಲಾಗುವುದು ಎಂದರು.

ಈ ವೇಳೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಿ.ಡಿ.ಬಸನಗೌಡ್ರ, ಮುಖಂಡರಾದ ದುರ್ಗಪ್ಪ ನೀರಲಗಿ, ಪರಮೇಶ್ವರಪ್ಪ ಕಟ್ಟೇಕಾರ, ರವೀಂದ್ರ ಮುದಿಯಪ್ಪನವರ, ವೀರನಗೌಡ ಪ್ಯಾಟೀಗೌಡ್ರ, ವಸಂತ ದ್ಯಾವಕ್ಕಳವರ, ಕಪಿಲದೇವ ಪೂಜಾರ, ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT