ಬುಧವಾರ, ಆಗಸ್ಟ್ 12, 2020
27 °C
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿಕೆ

ಜಮೀನು ಕೊಟ್ಟ ರೈತರಿಗೆ ನಿವೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಜಮೀನು ನೀಡುವ ರೈತರಿಗೆ, ನಿವೇಶನಗಳನ್ನು ವಿನ್ಯಾಸಗೊಳಿಸಿದ ನಂತರ 50:50 ಅನುಪಾತದಲ್ಲಿ ಹಂಚಿಕೆ ಮಾಡುವ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಇದೇ ಮಾದರಿಯಲ್ಲಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ 102 ಎಕರೆ ಜಮೀನನ್ನು ರೈತರಿಂದ ಪಡೆಯಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ತಿಳಿಸಿದರು.  

ಶನಿವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಪ್ರಾಧಿಕಾರದಿಂದ ನಿರ್ಮಾಣವಾಗುವ ಬಡಾವಣೆಗಳಲ್ಲಿ ಪತ್ರಕರ್ತರಿಗೆ ಶೇ 5ರಷ್ಟು ಮೀಸಲಾತಿ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಿಂದ ರಾಜ್ಯದಾದ್ಯಂತ ಪ್ರವಾಸ ಮಾಡಿ, ನಗರಗಳ ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ ಎಂದರು. 

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿ ಹಾಗೂ 24X7 ಕುಡಿಯುವ ನೀರು ವ್ಯವಸ್ಥೆಯನ್ನು ಅಗಸ್ಟ್ 15ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ನಗರ ಪ್ರದೇಶಗಳಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳನ್ನು ಸಕ್ರಮಗೊಳಿಸುವ ಮೂಲಕ ಕಂದಾಯವನ್ನು ವಸೂಲಿ ಮಾಡಲು ಮುಂದಿನ 2ರಿಂದ 3 ತಿಂಗಳಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ‌. ಅನೇಕ ಪುರಸಭೆ ಹಾಗೂ ಮಹಾನಗರ ಪಾಲಿಕೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಟ್ಟಡ ಪಡೆದವರು ಗುತ್ತಿಗೆ ಹಣವನ್ನು ಸರ್ಕಾರಕ್ಕೆ ಸರಿಯಾಗಿ ಕಟ್ಟುತ್ತಿಲ್ಲ. ಜತೆಗೆ ನೀಡಲಾದ ಗುತ್ತಿಗೆಯ ನವೀಕರಣ ಮಾಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದ್ದು, ಗುತ್ತಿಗೆ ಪಡೆದವರಿಗೆ ಸರ್ಕಾರ ನಿಗದಿಪಡಿಸಿದ ದರಕ್ಕೆ ಕಟ್ಟಡಗಳನ್ನು ನೀಡಿ, ಸರ್ಕಾರದ ಬೊಕ್ಕಸಕ್ಕೆ ಹಣ ಸಂಗ್ರಹಿಸುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.