ಶುಕ್ರವಾರ, 22 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳಿಗೆ ಕಾನೂನು ಅರಿವು ಅಗತ್ಯ

ಕಾನೂನು ಅರಿವು ನೆರವು ಕಾರ್ಯಕ್ರಮ: ಸಿವಿಲ್‌ ನ್ಯಾಯಾಧೀಶ ಪುಟ್ಟರಾಜು ಹೇಳಿಕೆ
Published 17 ಆಗಸ್ಟ್ 2023, 16:19 IST
Last Updated 17 ಆಗಸ್ಟ್ 2023, 16:19 IST
ಅಕ್ಷರ ಗಾತ್ರ

ಹಾವೇರಿ: ವಿದ್ಯಾರ್ಥಿಗಳು ತಮ್ಮ ಓದಿನ ಜೊತೆಗೆ ತಮ್ಮ ಹಕ್ಕುಗಳು ಮತ್ತು ಕಾನೂನು ಅರಿವು ಹೊಂದುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಪುಟ್ಟರಾಜು ಹೇಳಿದರು.

ಹಾವೇರಿ ನಗರದ ಸರ್ಕಾರಿ ಉರ್ದು ಪ್ರೌಢಶಾಲೆಯಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ ಹಾಗೂ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಮಾನವ ಕಳ್ಳ ಸಾಗಾಣಿಕೆ ತಡೆ, ಪೋಕ್ಸೊ ಕಾಯ್ದೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಕಾನೂನು ಉಲ್ಲಂಘನೆಯಾದಾಗ ಹಾಗೂ ಅಶಾಂತಿ ವಾತಾವರಣ ಉಂಟಾದಾಗ ವಿದ್ಯಾರ್ಥಿಗಳು ಕಾನೂನು ಪಾಲಿಸಿ ಸಾಮಾಜಿಕ ಬದಲಾವಣೆಗೆ ಕಾರಣರಾಗಬೇಕು ಎಂದು ಸಲಹೆ ನೀಡಿದರು.

ಪೆನಲ್ ವಕೀಲರಾದ ರೆಹನಾ ಐ.ಚನ್ನಪಟ್ಟಣ ಅವರು ಪೋಕ್ಸೊ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ಕುರಿತು ಹಾಗೂ ಉಪ ಕಾನೂನು ಅಭೀಕ್ಷಕರಾದ ಎಂ.ಸಿ.ಭರಮಣ್ಣನವರ ಅವರು ಮಾನವ ಕಳ್ಳ ಸಾಗಾಣಿಕೆ ತಡೆ ಹಾಗೂ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಕುರಿತು ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯ ಡಾ.ಬಿ.ಎಂ.ಬೇವಿನಮರದ ಮಾತನಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆದಲರ್ತಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಪಾಟೀಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಕಾರ್ಯದರ್ಶಿ ಈಶ್ವರ ನಂದಿಮ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಜಯಶ್ರೀ ಪಾಟೀಲ ಇದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT