ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗ್ರಾಹಕರ ಹಕ್ಕು: ಅರಿವು ಅಗತ್ಯ’

ಕಾನೂನು ಅರಿವು– ನೆರವು ಕಾರ್ಯಕ್ರಮದಲ್ಲಿ ನ್ಯಾ. ಕಿರಣ ಕಿಣಿ ಹೇಳಿಕೆ
Last Updated 16 ಮಾರ್ಚ್ 2021, 15:27 IST
ಅಕ್ಷರ ಗಾತ್ರ

ಹಾವೇರಿ: ‘ದೇಶದ ಪ್ರತಿಯೊಬ್ಬ ಪ್ರಜೆಯು ದೇಶದ ಕಾನೂನು ಹಾಗೂ ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಂಡಾಗ ಮಾತ್ರ, ತನಗೆ ಮೋಸ ಆದಾಗ ಅದಕ್ಕೆ ಪರಿಹಾರ ಕಂಡುಕೊಳ್ಳಲು ಸಾಧ್ಯ’ ಎಂದು ಪ್ರಧಾನ ಕೌಟುಂಬಿಕ ನ್ಯಾಯಾಧೀಶರಾದ ಕಿರಣ ಕಿಣಿ ಹೇಳಿದರು.

ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಅಭಿಯೋಜನಾ ಇಲಾಖೆ, ಜಿಲ್ಲಾಡಳಿತ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಕಾನೂನು ಮಾಪನಶಾಸ್ತ್ರ ಇಲಾಖೆ, ಚೈತನ್ಯ ರೂರಲ್ ಡೆವಲಪ್‍ಮೆಂಟ್ ಸೊಸೈಟಿ ಆಶ್ರಯದಲ್ಲಿ ನಗರದ ಎಂ.ಆರ್.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ‘ವಿಶ್ವ ಗ್ರಾಹಕರ ಹಕ್ಕು’ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಸ್ತುಗಳ ಖರೀದಿಯಲ್ಲಿ, ಸೇವೆಗಳಲ್ಲಿ ನಿಮಗೆ ಮೋಸವಾದರೆ ‘ಗ್ರಾಹಕರ ಆಯೋಗ’ಕ್ಕೆ ದೂರುಗಳನ್ನು ದಾಖಲಿಸಿ ಪರಿಹಾರ ಪಡೆದುಕೊಳ್ಳಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಂಡು ನಿಮ್ಮ ಸುತ್ತಮುತ್ತಲಿನವರಿಗೂ ತಿಳಿಸಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಬಿಲ್‌ ಪಡೆಯಿರಿ:

ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಸುನಂದಾ ದುರ್ಗೇಶ ಮಾತನಾಡಿ, ‘ನಾವು ಖರೀದಿಸಿದ ವಸ್ತುಗಳಿಗೆ ಪಡೆದ ಸೇವೆಗಳಿಗೆ ಸರಿಯಾದ ಬಿಲ್‍ಗಳನ್ನು ಪಡೆದು, ಸಂರಕ್ಷಿಸಿದರೆ ಮಾತ್ರ ನಾವು ಕಾನೂನಿನಡಿ ಗ್ರಾಹಕರಾಗುತ್ತೇವೆ. ನಮಗೆ ಮೋಸ ಆದರೆ ಈ ಬಿಲ್‍ಗಳ ಜೊತೆಗೆ ದೂರು ದಾಖಲಿಸಿ, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಸಹಾಯಕವಾಗುತ್ತದೆ’ ಎಂದು ಹೇಳಿದರು.

ಕಾಯ್ದೆಗೆ ತಿದ್ದುಪಡಿ:

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನೆಲ್ ವಕೀಲರಾದ ಪಿ.ಎಂ. ಬೆನ್ನೂರು ಮಾತನಾಡಿ, ‘ಗ್ರಾಹಕರ ರಕ್ಷಣಾ ಕಾಯ್ದೆ-2019 ಕುರಿತು ಉಪನ್ಯಾಸ ನೀಡಿ, ಗ್ರಾಹಕರು ತಮ್ಮ ಹಕ್ಕುಗಳನ್ನು ಸಮರ್ಪಕವಾಗಿ ಚಲಾಯಿಸಲು 1986 ಹಳೇ ಗ್ರಾಹಕರ ಹಕ್ಕು ಕಾಯ್ದೆಯಲ್ಲಿನ ತೊಡಕುಗಳನ್ನು ನಿವಾರಿಸಿ, ಮಾರ್ಪಾಡು ಮಾಡಿ ಗ್ರಾಹಕರ ರಕ್ಷಣಾ ಕಾಯ್ದೆ-2019 ಗ್ರಾಹಕರ ವ್ಯಾಖ್ಯಾನಕ್ಕೆ ಹೆಚ್ಚಿನ ವ್ಯಾಪ್ತಿಯನ್ನು ತರಲಾಗುತ್ತಿದೆ ಎಂದು ಹೇಳಿದರು.

ಒಂದು ಕೋಟಿವರೆಗೆ (ಮೊದಲು 20 ಲಕ್ಷ ಇತ್ತು) ಪರಿಹಾರ ದೂರುಗಳನ್ನು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದಾಖಲಿಸಬಹುದು. ಗ್ರಾಹಕರು ದೂರು ದಾಖಲಿಸಲು ಜಿಲ್ಲಾ, ರಾಜ್ಯ, ರಾಷ್ಟ್ರ ಎಂದು ಮೂರು ಆಯೋಗಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಕೆ.ಸಿ.ಪಾವಲಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ವಾಸುದೇವ್ ಆರ್.ಗುಡಿ, ಜಿಲ್ಲಾ ನ್ಯಾಯಾಲಯ ಸರ್ಕಾರಿ ಅಭಿಯೋಜಕ ಎಸ್.ಎಂ. ಗೆಜ್ಜಿಹಳ್ಳಿ, ಮಹೇಶ್ವರಿ ವಿ.ಎಸ್, ಗೀತಾ ಪಾಟೀಲ, ಡಿ.ಆರ್. ಚೌಗಲಾ, ಎಸ್.ಎಚ್. ಮಜೀದ, ಪ್ರಾಚಾರ್ಯ ರಾಮ್ ಮೋಹನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT