ಶಿಗ್ಗಾವಿ: ತಾಲ್ಲೂಕಿನ ಕೋಣನಕೇರಿ ಗ್ರಾಮದ ಗೌರಿ ಕಟ್ಟೆಕೆರೆ ಹತ್ತಿರದ ಅರಣ್ಯ ಪ್ರದೇಶದಲ್ಲಿ ಮೃತ ಗಂಡು ಚಿರತೆ ಕಳೇಬರವನ್ನು ಪಶುವೈದ್ಯರು, ಅರಣ್ಯ ಅಧಿಕಾರಿಗಳು ಶನಿವಾರ ಪರಿಶೀಲಿಸಿದರು.

ತಾಲ್ಲೂಕಿನ ದುಂಡಸಿ ಪ್ರಾದೇಶಿಕ ವಲಯದ ಅರಣ್ಯ ಪ್ರದೇಶದ ಮಾರ್ಗದಲ್ಲಿ ಹೋಗಿರುವ ಹಾನಗಲ್-ಹುಬ್ಬಳ್ಳಿ ರಸ್ತೆಯಲ್ಲಿ ಸುಮಾರು ಮೂರು ವರ್ಷದ ಗಂಡು ಚಿರತೆ ಅಪಘಾತಕ್ಕೆ ಬಲಿಯಾಗಿರಬಹುದು ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದರು. ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ದೇಹದ ಯಾವುದೇ ಭಾಗದಲ್ಲಿ ಗಾಯವಿಲ್ಲದ ಕಾರಣ ಸಣ್ಣ ವಯಸ್ಸಿನ ಚಿರತೆ ತಲೆಭಾಗಕ್ಕೆ ಪೆಟ್ಟು ಬಿದ್ದು ಮೃತಪಟ್ಟಿದೆ. ಹೀಗಾಗಿ ಅಪಘಾತವಾಗಿರಬಹುದು ಎಂದು ಶಂಕಿಸಲಾಗಿದೆ.

ಹಾವೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಬ್ದುಲ್ ಅಜೀತ್ ಶೇಖ್, ಹಾನಗಲ್ಲ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಾನಂದ ಪೂಜಾರಿ, , ದುಂಡಸಿ ವಲಯ ಅರಣ್ಯ ಅಧಿಕಾರಿ ಕೆ.ಮಲ್ಲಪ್ಪ, ತಾಲ್ಲೂಕು ಪಶುವೈದ್ಯಾಧಿಕಾರಿ ರಾಜೇಂದ್ರ ಅರಳೇಶ್ವರ ಸೇರಿದಂತೆ ಅರಣ್ಯ ಇಲಾಖೆ ಸಿಬ್ಬಂದಿ ಇದ್ದರು. ಈ ಕುರಿತು ವನ್ಯಜೀವಿ ಪ್ರಕರಣದಡಿ ಪ್ರಕರಣ ದಾಖಲಿಸಲಾಗಿದೆ.

ವಾಹನ ಸವಾರರು ವೇಗವಾಗಿ ಸಂಚಿರಿಸುತ್ತಿದ್ದಾರೆ. ಇದರಿಂದ ರಾತ್ರಿ ಹೊತ್ತಿನಲ್ಲಿ ಕಾಡು ಪ್ರಾಣಿಗಳು ಅಪಘಾತಕ್ಕೆ ಬಲಿಯಾಗುತ್ತಿವೆ. ವಾಹನ ಸವಾರರು ವೇಗದ ಮೀತಿ ಕಡಿಮೆ ಮಾಡಿಕೊಂಡು ಸಂಚರಿಸಬೇಕು
ಕೆ.ಮಲ್ಲಪ್ಪ ದುಂಡಸಿ ವಲಯ ಅರಣ್ಯ ಅಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.