ಶನಿವಾರ, ಸೆಪ್ಟೆಂಬರ್ 25, 2021
22 °C

ಹಿರೇನಂದಿಹಳ್ಳಿ ಬಳಿ ಚಿರತೆ ಪ್ರತ್ಯಕ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಡಗಿ: ತಾಲ್ಲೂಕಿನ ಹಿರೇನಂದಿಹಳ್ಳಿ ಗ್ರಾಮದ ಬಳಿ ಗುರುವಾರ ಚಿರತೆಯೊಂದು ಧನಂಜಯ ಅಂಗಡಿ ಎಂಬುವರ ಮೇಕೆಯನ್ನು ಬೇಟೆಯಾಡಿದೆ. ಸುತ್ತಲಿನ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಕಳೆದ ಆ.7ರಂದು ಮಾಸಣಗಿ ಬಳಿ ಚಿರತೆ ಕಾಣಿಸಿಕೊಂಡಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿ ಅದನ್ನು ಜೀವಂತ ಸೆರೆ ಹಿಡಿಯಲು ಬೋನ್‌ ಅಳವಡಿಸಿದ್ದರು. ಚಿರತೆ ಬಿದ್ದಿರುವ ಬಗ್ಗೆ ಕುತೂಹಲದಿಂದ ನೋಡಲು ನಿತ್ಯ ಬೋನ್‌ ಬಳಿ ತೆರಳುತ್ತಾರೆ. ಹೀಗಾಗಿ ಚಿರತೆ ಸೆರೆಸಿಕ್ಕಿಲ್ಲ, ಬೋನ್‌ ಬಳಿ ಜನರು ತೆರಳದಂತೆ ಮನವಿ ಮಾಡಿಕೊಳ್ಳಲಾಗಿದೆ.

ಮೇಕೆಯ ಮಾಲೀಕರಿಗೆ ಪರಿಹಾರದ ಹಣವನ್ನು ಸಂದಾಯ ಮಾಡುವುದಾಗಿ ವಲಯ ಅರಣ್ಯಾಧಿಕಾರಿ ಮಹೇಶ ಮರೆಣ್ಣನವರ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.