ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕಾಂಗ್ರೆಸ್‌ ಸಾಧನೆ ಜನರಿಗೆ ತಿಳಿಸಿ’

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸಲಹೆ
Last Updated 6 ಸೆಪ್ಟೆಂಬರ್ 2020, 15:27 IST
ಅಕ್ಷರ ಗಾತ್ರ

ಹಾವೇರಿ: ‘ಕಾಂಗ್ರೆಸ್‌ ತನ್ನ ಆಡಳಿತಾವಧಿಯಲ್ಲಿ ಅನೇಕ ಸಾಧನೆಗಳನ್ನು ಮಾಡಿದೆ. ಆದರೆ, ಜನರಿಗೆ ಅದನ್ನು ತಲುಪಿಸುವಲ್ಲಿ ಎಡವಿದ್ದೇವೆ. ಇನ್ನಾದರೂ ಕಾರ್ಯಕರ್ತರು ಮತ್ತು ಮುಖಂಡರು ಒಗ್ಗೂಡಿ ಕಾಂಗ್ರೆಸ್ ಕೊಡುಗೆಯನ್ನು ತಿಳಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಭಾನುವಾರಆಯೋಜಿಸಿದ್ದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ದೇಶದ ಪ್ರಧಾನಿ ಮೋದಿ ಅವರು ಸಾಧನೆಗಳೇ ಇಲ್ಲದೇ ಮಾತಾಡಿ, ಮಾತಾಡಿ ಮಾರ್ಕೆಟಿಂಗ್‌ ಮಾಡುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಕ್ಷದ ಸಾಧನೆಗಳನ್ನು ಮಾತಾಡಿ, ಮಾರ್ಕೆಟಿಂಗ್‌ ಮಾಡುವಂತೆ ಸಲಹೆ ನೀಡಿದರು.

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ‌ ಅಧ್ಯಕ್ಷರಾದ ಮೇಲೆ ಪಕ್ಷದ ಸಂಘಟನೆಯಲ್ಲಿ ಅನೇಕ ಬದಲಾವಣೆಗಳನ್ನು ತಂದಿದ್ದಾರೆ. ಪಕ್ಷದಲ್ಲಿ ಕೆಲಸ ಮಾಡುವವರಿಗೆ ಮಾತ್ರ ಹುದ್ದೆಗಳನ್ನು ನೀಡಲಾಗುವುದು. ಕೆಲಸ ಮಾಡದ ಪದಾಧಿಕಾರಿಗಳನ್ನು ಬದಲಾಯಿಸಲಾಗುವುದು. ಕೆಲಸ ಮಾಡುವವರಿಗೆ ಮಾತ್ರ ಅಧಿಕಾರ ನೀಡಲಾಗುವುದು ಎಂದು ನುಡಿದರು.

ಕಾಂಗ್ರೆಸ್‍ನಲ್ಲಿ 25 ಘಟಕಗಳಿದ್ದು, ಇವುಗಳಲ್ಲಿ ಬಹತೇಕ ಘಟಕಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ರಾಜ್ಯ ಘಟಕದಿಂದ ಹೋರಾಟಕ್ಕೆ ಕರೆ ನೀಡಿದ ಸಂದರ್ಭದಲ್ಲಿ ಆಯಾ ಘಟಕದ ಪದಾಧಿಕಾರಿಗಳು ಮಾತ್ರ ಇರುತ್ತಾರೆ. ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಳ್ಳುವ ಮೂಲಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಯಲ್ಲಿ ಎಲ್ಲರೂ ತೊಡಗಿಕೊಳ್ಳಬೇಕೆಂದು ಸೂಚನೆ ನೀಡಿದರು.

ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು ಎಂದು ನಲವತ್ತು ವರ್ಷಗಳಿಂದ ಹೋರಾಟ ನಡೆಯುತ್ತಿದೆ.ಸಂವಿಧಾನಬದ್ಧವಾಗಿ ಶೇಕಡಾ 7.5 ಸಿಗಬೇಕಾದ ಹಕ್ಕು. ಮುಖ್ಯಮಂತ್ರಿ ಭೇಟಿಗೆ ಈ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದರು.

ವಿಧಾನಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಮನೋಹರ ತಹಶೀಲ್ದಾರ, ಮಾಜಿ ಶಾಸಕ ಬಿ.ಎಚ್.ಬನ್ನಿಕೋಡ ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಭಿನ್ನಾಭಿಪ್ರಾಯಗಳಿಲ್ಲ. ಮುಖಂಡರಲ್ಲಿ ಭಿನ್ನಾಭಿಪ್ರಾಯಗಳಿವೆ. ಇವುಗಳನ್ನು ಸರಿಪಡಿಸಿದರೇ ಪಕ್ಷದ ಸಂಘಟನೆ ಸುಭದ್ರವಾಗುತ್ತದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ವಹಿಸಿದ್ದರು. ಮಾಜಿ ಶಾಸಕ ಅಜ್ಜಫೀರ್ ಖಾದ್ರಿ,ನಗರಸಭಾ ಸದಸ್ಯ ಸಂಜೀವಕುಮಾರ ನೀರಲಗಿ, ಜಗದೀಶ ಬೆಟಗೇರಿ, ನಾಗಪ್ಪ ತಿಪ್ಪಕ್ಕನವರ, ಪಿ.ಡಿ.ಬಸನಗೌಡ್ರ, ಶ್ರೀಕಾಂತ ದುಂಡಿಗೌಡ್ರ, ಜಿಲ್ಲಾ ಪಂಚಾಯಿತಿ ಸದಸ್ಯ ಕೊಟ್ರೇಶಪ್ಪ ಬಸೇಗಣ್ಣಿ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರೇಮಾ ಪಾಟೀಲ, ಈರಪ್ಪ ಲಮಾಣಿ, ಪ್ರಕಾಶ ಹಾದಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT