ಭಾನುವಾರ, ಅಕ್ಟೋಬರ್ 17, 2021
23 °C

ಹಾವೇರಿ: ಕುಟುಂಬ ರಾಜಕಾರಣ ಕೊನೆಯಾಗಲಿ; ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಕುಟುಂಬ ರಾಜಕಾರಣ ಮಾಡಬಾರದು ಎಂಬುದು ಬಿಜೆಪಿ ಪಕ್ಷದ ನಿಲುವು. ಹೀಗಾಗಿ ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡದೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಕೃಷ್ಣ ಆರ್.ಈಳಗೇರ ಅವರಿಗೆ ಟಿಕೆಟ್‌ ನೀಡಬೇಕು ಎಂದು ಶ್ಯಾಡಗುಪ್ಪಿ ಗ್ರಾಮ ಪಂಚಾಯ್ತಿ ಸದಸ್ಯ ಮಲ್ಲಿಕಾರ್ಜುನ ಬಾಳೂರು ಒತ್ತಾಯಿಸಿದರು. 

ಸಿ.ಎಂ.ಉದಾಸಿ ಅವರನ್ನು ಗೆಲ್ಲಿಸಲು ಕೃಷ್ಣ ಈಳಗೇರ ಪ್ರಮುಖ ಪಾತ್ರ ವಹಿಸಿದ್ದಾರೆ. 25 ವರ್ಷಗಳಿಂದ ಕ್ಷೇತ್ರದಲ್ಲಿ ಪಕ್ಷದ ಅಭಿವೃದ್ಧಿಗಾಗಿ ಸಂಘಟನೆ ಮಾಡಿದ್ದಾರೆ. ಪ್ರಸ್ತುತ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಕ್ಷೇತ್ರದ ಮತದಾರರು ಮತ್ತು ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಛಿಸಿದ್ದಾರೆ. ಈ ಬಾರಿ ಪಕ್ಷವು ಹೊಸ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. 

ಪತ್ರಿಕಾಗೋಷ್ಠಿಯಲ್ಲಿ ಜಗದೀಶ, ಲಕ್ಷ್ಮಣ ತೋಟದ, ಬಸವರಾಜು ಹಿರೇಮಠ, ಶ್ರೀಕಾಂತ ಸಾವಕ್ಕನವರ, ನಾಗರಾಜ ಹಾದಿಮನಿ, ಶಿವಯೋಗಿ ಬಾಳೂರು ಇದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.