ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಚೇರಿಗಳು ಭ್ರಷ್ಟಾಚಾರ ಮುಕ್ತವಾಗಲಿ: ಶಾಸಕ ಯು.ಬಿ.ಬಣಕಾರ

ಪ್ರಗತಿ ಪರಿಶೀಲನಾ ಸಭೆ; ಅಧಿಕಾರಿಗಳಿಗೆ ಶಾಸಕ ಯು.ಬಿ.ಬಣಕಾರ ಎಚ್ಚರಿಕೆ
Published 2 ಜೂನ್ 2023, 16:45 IST
Last Updated 2 ಜೂನ್ 2023, 16:45 IST
ಅಕ್ಷರ ಗಾತ್ರ

ಹಿರೇಕೆರೂರು: ತಾಲ್ಲೂಕಿನ ಎಲ್ಲ ಸರ್ಕಾರಿ ಕಾರ್ಯಾಲಯಗಳು ಭ್ರಷ್ಟಾಚಾರ ಮುಕ್ತವಾಗಲಿ. ಸಾರ್ವಜನಿಕರ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸುವ ಕೆಲಸವಾಗಲಿ ಎಂದು ಶಾಸಕ ಯು.ಬಿ.ಬಣಕಾರ ಸೂಚನೆ ನೀಡಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ಎಲ್ಲ ಕಚೇರಿಗಳು ಜನಸ್ನೇಹಿ ಆಗಬೇಕು. ಜನರು ತಮಗೆ ಬೇಕಾದ ಸೇವೆಗಳನ್ನು ಪಡೆದು ಖುಷಿಯಿಂದ ಹೊರಹೋಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. ಈ ವಿಷಯದಲ್ಲಿ ಲೋಪದೋಷಗಳು ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮೃತ ರೈತರ ಕುಟುಂಬದ ಮಕ್ಕಳು ಶಿಕ್ಷಣ ಪಡೆಯಲು ಮೊರಾರ್ಜಿ ವಸತಿ ಶಾಲೆಗಳಲ್ಲಿ ಅವಕಾಶವಿದ್ದು, ಅಂತಹ ಮಕ್ಕಳನ್ನು ಗುರುತಿಸಬೇಕು. ಅವರ ಕುಟುಂಬದ ಸದಸ್ಯರಿಗೆ ತ್ವರಿತವಾಗಿ ಸಾಮಾಜಿಕ ಭದ್ರತಾ ಯೋಜನೆ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಆರೋಗ್ಯ ಸಮಸ್ಯೆ ಹೊಂದಿರುವ ಕುಟುಂಬದವರಿಗೆ ಬಿಪಿಎಲ್ ಕಾರ್ಡ್ ಹೊಸದಾಗಿ ಮಾಡಿಸಿಕೊಳ್ಳಲು ಹಾಗೂ ಹೊಸ ಸದಸ್ಯರ ಸೇರ್ಪಡೆಗೆ ಅವಕಾಶವಿದ್ದು, ಅಂತಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವ್ಯವಸ್ಥೆ ಮಾಡಬೇಕು. ಪಡಿತರ ಅಕ್ಕಿ ಕಳ್ಳ ಸಾಗಣೆ ಆಗುವುದು ಕಂಡುಬಂದಲ್ಲಿ ತಹಶೀಲ್ದಾರ್, ಇಒ, ಸಿಪಿಐ ಕ್ರಮ ಕೈಗೊಳ್ಳಬೇಕು. ಅಕ್ರಮ ಆಗದಂತೆ ತಡೆಗಟ್ಟಬೇಕು ಎಂದು ಸೂಚಿಸಿದರು.

ತಾಲ್ಲೂಕಿನ ಜನತೆಯ ಬೇಡಿಕೆಯ ಮಾರ್ಗಗಳನ್ನು ಪಟ್ಟಿ ಮಾಡಿ ಬಸ್ ಕಾರ್ಯಾಚರಣೆಗೆ ಮಾಡಬೇಕು. ವೇಳೆಗೆ ಸರಿಯಾಗಿ ಬಸ್ ಓಡಿಸಬೇಕು. ಅವಳಿ ತಾಲ್ಲೂಕಿನಲ್ಲಿ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಗೆ ತೊಂದರೆಗಳು ಆಗದಂತೆ ನೋಡಿಕೊಳ್ಳಬೇಕು. ಆಸ್ಪತ್ರೆ ಹೊರಭಾಗದಲ್ಲಿ ಕರ್ತವ್ಯ ನಿರತ ವೈದ್ಯರ ಹೆಸರು ಮತ್ತು ದೂರವಾಣಿ ಸಂಖ್ಯೆ ಅಳವಡಿಸಬೇಕು ಎಂದು ಸೂಚಿಸಿದರು.

ಹಿರೇಕೆರೂರ ತಹಶೀಲ್ದಾರ್ ಎಚ್.ಪ್ರಭುಗೌಡ, ರಟ್ಟೀಹಳ್ಳಿ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ.ಎಚ್, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಸಾಮರಸ್ಯದಿಂದ ಕೆಲಸ ಮಾಡಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಬೇಕು. ಚುರುಕಿನಿಂದ ಕೆಲಸ ಮಾಡುವ ಅಭಿರುಚಿ ಬೆಳೆಸಿಕೊಳ್ಳಬೇಕು.

– ಯು.ಬಿ.ಬಣಕಾರ ಶಾಸಕ

‘ಜನರ ಕಷ್ಟಕ್ಕೆ ಸ್ಪಂದಿಸಿ’ ನಮ್ಮ ಕಷ್ಟಕ್ಕೆ ಅಧಿಕಾರಿಗಳು ತುರ್ತಾಗಿ ಸ್ಪಂದಿಸುತ್ತಾರೆ ಎಂಬ ಭಾವನೆ ಜನರಲ್ಲಿ ಮೂಡಬೇಕು. ಅವರೊಂದಿಗೆ ಉತ್ತಮ ನಡವಳಿಕೆ ಇರಬೇಕು. ಸಾರ್ವಜನಿಕರಿಂದ ನ್ಯಾಯಯುತ ದೂರುಗಳು ಬಂದಲ್ಲಿ ಕಾನೂನು ಕ್ರಮ ಅನಿವಾರ್ಯ. ಅಂತಹ ಸಂದರ್ಭಗಳು ಒದಗಿ ಬರುವುದು ಬೇಡ. ನಿಯಮಾನುಸಾರ ಜನರಿಗೆ ಸಿಗಬೇಕಾದ ಸೌಲಭ್ಯಗಳನ್ನು ನಿಗದಿತ ಅವಧಿಯಲ್ಲಿ ಒದಗಿಸುವ ಕೆಲಸವಾಗಲಿ ಎಂದು ಶಾಸಕ ಯು.ಬಿ.ಬಣಕಾರ ಅವರು ಅಧಿಕಾರಿಗಳಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT