ಗುತ್ತಲ (ಹಾವೇರಿ ಜಿಲ್ಲೆ): ‘ರಾಜ್ಯದಲ್ಲಿ ಜಾತಿ ಗಣತಿ ವರದಿ ಬಗ್ಗೆ ಪರ ಮತ್ತು ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿದ್ದು, ಜನಗಣತಿ ಪ್ರಕ್ರಿಯೆ ಇನ್ನೊಮ್ಮೆ ನಡೆಯಲಿ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ವೀರಸೋಮೇಶ್ವರ ಸ್ವಾಮೀಜಿ ಆಗ್ರಹಿಸಿದರು.

‘ಬಹು ದೊಡ್ಡ ವೀರಶೈವ ಲಿಂಗಾಯತ ಸಮಾಜದ ಒಳಪಂಗಡಗಳನ್ನು ವಿಂಗಡಿಸುವ ಮೂಲಕ ಸಮಾಜದ ಒಟ್ಟಾರೆ ಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಒಕ್ಕಲಿಗರಿಗೂಅನ್ಯಾಯವಾಗಿದೆ. ತಪ್ಪು ಸರಿಪಡಸಬೇಕೆ ಸಮುದಾಯಗಳ ತುಷ್ಟೀಕರಣ ಆಗಬಾರದು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಂವಿಧಾನದಲ್ಲಿ ಯಾವ ಜಾತಿಗಳಿಗೆ ಎಷ್ಟು ಪ್ರಾತಿನಿಧ್ಯ ಕೊಡಬೇಕೆಂಬುದನ್ನು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಒಳ್ಳೆಯದು. ಆತುರದ ನಿರ್ಧಾರ ಕೈಗೊಂಡರೆ ಸರ್ಕಾರಕ್ಕೆ ತೊಂದರೆ ಆಗಬಹುದು. ಈ ಎಲ್ಲಾ ಬೆಳವಣಿಗೆಗಳನ್ನು ಮುಖ್ಯಮಂತ್ರಿಯವರು ಗಂಭೀರವಾಗಿ ಪರಿಗಣಿಸಬೇಕು. ಇಲ್ಲದಿದ್ದರೆ, ಜಾತಿ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.