ಹಾವೇರಿ: ಸ್ವ ಉದ್ಯೋಗ, ಶಿಕ್ಷಣ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ಜಿಲ್ಲಾ ಸಮಿತಿಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿದರು.

ಅಲ್ಪಸಂಖ್ಯಾತ ವರ್ಗ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಸೇರಿದಂತೆ ಶೈಕ್ಷಣಿಕ ಸೌಲಭ್ಯಗಳು ಆದ್ಯತೆಯ ಮೇಲೆ ತಲುಪಬೇಕು. ಈ ನಿಟ್ಟಿನಲ್ಲಿ ಉದಾಸೀನ ಮಾಡಬಾರದು. ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳ ಮುಖ್ಯಶಿಕ್ಷಕರಿಗೆಸೂಚನೆ ನೀಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತ ಸಮುದಾಯದ ಶೈಕ್ಷಣಿಕ ಚಟುವಟಿಕೆಗೆ ಮಂಜೂರಾದ ಶಾಲೆ ಕೊಠಡಿ, ವಿದ್ಯಾರ್ಥಿ ನಿಲಯ ಹಾಗೂ ಮೌಲಾನಾ ಆಜಾದ್ ಶಾಲೆಗಳಿಗೆ ನಿವೇಶನಗಳ ಕೊರತೆ ಹಾಗೂ ಬದಲಾವಣೆಗಳಿದ್ದರೆ ಇಲಾಖಾ ಅಧಿಕಾರಿಗಳು ವೈಯಕ್ತಿಕ ಗಮನಹರಿಸಿ ಮಂಜೂರು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರಧಾನಮಂತ್ರಿಗಳ ಅಭಿವೃದ್ಧಿ ಯೋಜನೆಯಡಿ ಉರ್ದು ಶಾಲೆಗೆ 70 ಕೊಠಡಿಗಳು ಮಂಜೂರಾಗಿದ್ದು, 67 ಕೊಠಡಿಗಳು ಪೂರ್ಣಗೊಂಡಿವೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 1178 ಫಲಾನುಭವಿಗಳಿಗೆ ₹3.33 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ನೀಡಲು ಗುರಿ ನಿಗದಿಪಡಿಸಲಾಗಿದೆಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೃಷಿ ಇಲಾಖೆಯಿಂದ ₹6.51 ಕೋಟಿ ವೆಚ್ಚದಲ್ಲಿ ವಿವಿಧ ಕೃಷಿ ಯೋಜನೆಯಡಿ 6496 ಅಲ್ಪಸಂಖ್ಯಾತ ರೈತರಿಗೆ ಸೌಲಭ್ಯ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿದೆ. ತೋಟಗಾರಿಕೆ ಇಲಾಖೆ ವತಿಯಿಂದ 110 ಅಲ್ಪಸಂಖ್ಯಾತ ರೈತರಿಗೆ ಕೃಷಿ ಸಿಂಚಾಯಿ, ತೋಟಗಾರಿಕೆ ಯಂತ್ರ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. 94 ರೇಷ್ಮೆ ಬೆಳೆಗಾರರಿಗೆ ರೇಷ್ಮೆ ಇಲಾಖೆಯಿಂದ ಸೌಲಭ್ಯ ಕಲ್ಪಿಸಲಾಗಿದೆ. 32 ಜನರಿಗೆ ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ಕಲ್ಪಿಸಲಾಗಿದೆ. 17 ಸಾವಿರ ಜಾನುವಾರುಗಳಿಗೆ ಪಶು ಸಂಗೋಪನಾ ಇಲಾಖೆಯಿಂದ ಲಸಿಕೆ ಹಾಕಲಾಗಿದೆ ಎಂದು ಆಯಾ ಇಲಾಖಾ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಭಾನುವಳ್ಳಿ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್ ರೋಷನ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಮಖಾನೆ, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ರಾಜೀವ ಕೂಲೇರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ.ಪ್ರದೀಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.