ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಹಿತ್ಯ ಸಮ್ಮೇಳನ: 17 ಸಮಿತಿಗಳ ರಚನೆ

ಸ್ವಾಗತ ಸಮಿತಿ ಮತ್ತು ಹಣಕಾಸು ಸಮಿತಿ ಅಧ್ಯಕ್ಷರಾಗಿ ಸಚಿವ ಬೊಮ್ಮಾಯಿ ನೇಮಕ
Last Updated 22 ಜನವರಿ 2021, 17:02 IST
ಅಕ್ಷರ ಗಾತ್ರ

ಹಾವೇರಿ: ಫೆಬ್ರುವರಿ 26,27 ಹಾಗೂ 28ರಂದು ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಗಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರ ಒಳಗೊಂಡಂತೆ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರನ್ನು ಒಳಗೊಂಡಿರುವಂತೆ ವಿವಿಧ 17 ಸಮಿತಿಗಳನ್ನು ರಚಿಸಲಾಗಿದೆ.

ಸ್ವಾಗತ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸದಸ್ಯ ಕಾರ್ಯದರ್ಶಿಗಳಾಗಿ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಯೋಗೇಶ್ವರ ಅವರನ್ನು ನೇಮಕ ಮಾಡಲಾಗಿದೆ. ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ ಅಧ್ಯಕ್ಷರಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ವಸಂತಕುಮಾರ ಎ. ಅವರನ್ನು ನೇಮಕ ಮಾಡಲಾಗಿದೆ.

ಪ್ರತಿನಿಧಿಗಳ ನೋಂದಣಿ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಎಸ್ ಸಂಕನೂರ, ಸದಸ್ಯ ಕಾಯದರ್ಶಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ ಅವರನ್ನು ನೇಮಕ ಮಾಡಲಾಗಿದೆ.

ವೇದಿಕೆ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಶಾಸಕ ನೆಹರು ಚ ಓಲೇಕಾರ, ಸದಸ್ಯ ಕಾಯದರ್ಶಿಗಳಾಗಿ ನಗರಸಭೆ ಪೌರಾಯುಕ್ತರಾದ ಪರಶುರಾಮ ಚಲವಾದಿ ಅವರನ್ನು ನೇಮಕ ಮಾಡಲಾಗಿದೆ. ವಸತಿ ಸಮಿತಿ ಅಧ್ಯಕ್ಷರಾಗಿ ಬ್ಯಾಡಗಿ ಶಾಸಕ ವಿಪಾಕ್ಷಪ್ಪ ಬಳ್ಳಾರಿ, ಸದಸ್ಯ ಕಾರ್ಯದರ್ಶಿಗಳಾಗಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಮಠದ ಅವರನ್ನು ನೇಮಕ ಮಾಡಲಾಗಿದೆ.

ವೇದಿಕೆ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಶಾಸಕ ನೆಹರು ಓಲೇಕಾರ, ಸದಸ್ಯ ಕಾಯದರ್ಶಿಗಳಾಗಿ ಪಂಚಾಯತ್ ರಾಜ್ ಇಲಾಖೆ ಕಾರ್ಯನಿವಾಹಕ ಎಂಜಿನಿಯರ್‌ ಸಾಂಬಾಜಿ ಅತರ್‍ವಾಲ್ ಅವರನ್ನು ನೇಮಕ ಮಾಡಲಾಗಿದೆ.

ಪ್ರಚಾರ ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಏಕನಾಥ ಬಾನುವಳ್ಳಿ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ವಾರ್ತಾಧಿಕಾರಿ ಡಾ.ಬಿ.ಆರ್ ರಂಗನಾಥ್ ಅವರನ್ನು ನೇಮಕ ಮಾಡಲಾಗಿದೆ. ಮೆರವಣಿಗೆ ಸಮಿತಿ ಅಧ್ಯಕ್ಷರಾಗಿ ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸದಸ್ಯ ಕಾರ್ಯದರ್ಶಿಗಳಾಗಿ ತಾಲ್ಲೂಕು ಪಂಚಾಯ್ತಿ ಇಒ ಬಸವರಾಜ ಅವರನ್ನು ನೇಮಕ ಮಾಡಲಾಗಿದೆ.

ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿ ಅಧ್ಯಕ್ಷರಾಗಿ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷರಾದ ಯು.ಬಿ. ಬಣಕಾರ, ಸದಸ್ಯ ಕಾರ್ಯದರ್ಶಿಗಳಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ವೀ ಹುಡೇದ ಅವರನ್ನು ನೇಮಕ ಮಾಡಲಾಗಿದೆ.

ಆಹಾರ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಸದಸ್ಯ ಕಾರ್ಯದರ್ಶಿಗಳಾಗಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಿಗಿ ಅವರನ್ನು ನೇಮಕ ಮಾಡಲಾಗಿದೆ. ಸಾರಿಗೆ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಸದಸ್ಯ ಕಾರ್ಯದರ್ಶಿಗಳಾಗಿ ವಿಭಾಗಿಯ ನಿಯಂತ್ರಣಾಧಿಕಾರಿ ಜಗದೀಶ ಅವರನ್ನು ನೇಮಕ ಮಾಡಲಾಗಿದೆ.

ಆರೋಗ್ಯ ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ, ಸದಸ್ಯ ಕಾರ್ಯದರ್ಶಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ರಾಜೇಂದ್ರ ದೊಡ್ಡಮನಿ ಅವರನ್ನು ನೇಮಕ ಮಾಡಲಾಗಿದೆ. ಮಹಿಳಾ (ಸಖಿ) ಸಮಿತಿ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಉಪಾದ್ಯಕ್ಷೆ ರಾಜೇಶ್ವರಿ ಕಲ್ಲೇರ, ಸದಸ್ಯ ಕಾರ್ಯದರ್ಶಿಗಳಾಗಿ ಮಹಿಳಾ ಮತ್ತು ಮಕ್ಕಳು ಕಲ್ಯಾಣ ಇಲಾಖೆ ನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ ಅವರನ್ನು ನೇಮಕ ಮಾಡಲಾಗಿದೆ.

ಸಮನ್ವಯ ಸಮಿತಿ ಅಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸದಸ್ಯ ಕಾರ್ಯದರ್ಶಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಅಂದಾನಪ್ಪ ವಡಿಗೇರಿ ಅವರನ್ನು ನೇಮಕ ಮಾಡಲಾಗಿದೆ. ಪುಸ್ತಕ ಮಳಿಗೆ ಹಾಗೂ ವಸ್ತು ಪ್ರದರ್ಶನ ಸಮಿತಿ ಅಧ್ಯಕ್ಷರಾಗಿ ನಗಾರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ಸದಸ್ಯ ಕಾರ್ಯದರ್ಶಿಗಳಾಗಿ ಕೈಗಾರಿಕೆ ಇಲಾಖೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಜು ಅವರನ್ನು ನೇಮಕ ಮಾಡಲಾಗಿದೆ.

ಶಿಷ್ಟಾಚಾರ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ನೇಮಕ ಮಾಡಲಾಗಿದೆ. ಧ್ವಜ ನಿರ್ವಹಣಾ ಸಮಿತಿ ಅಧ್ಯಕ್ಷರಾಗಿ ಡಿಡಿಪಿಐ ಅಂದಾನಪ್ಪ ವಡಗೇರಿ ಹಾಗೂ ಸದಸ್ಯ ಕಾರ್ಯದರ್ಶಿಗಳಾಗಿ ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ ಅವರನ್ನು ನೇಮಕ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT