ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇ 21ರಿಂದ 25ರವರೆಗೆ ಸಂಪೂರ್ಣ ಲಾಕ್‌ಡೌನ್‌

ಭಾನುವಾರ ತರಕಾರಿ ಖರೀದಿಗೆ ಅವಕಾಶ: ಜಿಲ್ಲಾಧಿಕಾರಿ ಆದೇಶ
Last Updated 19 ಮೇ 2021, 16:35 IST
ಅಕ್ಷರ ಗಾತ್ರ

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆಯ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಮೇ 21ರ ಬೆಳಿಗ್ಗೆ 6ರಿಂದ ಮೇ 25ರ ಬೆಳಿಗ್ಗೆ 6ರವರೆಗೆ ಅಗತ್ಯ ವಸ್ತು ಮತ್ತು ಅಗತ್ಯ ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳನ್ನು ಜಿಲ್ಲೆಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಅಗತ್ಯ ವಸ್ತು ಮತ್ತು ಸೇವೆಗಳಾದ ಹಾಲು, ಆಸ್ಪತ್ರೆ, ಔಷಧ ಅಂಗಡಿ, ಆಂಬುಲೆನ್ಸ್‌, ಅಗ್ನಿಶಾಮಕ, ಪೆಟ್ರೋಲ್‌ ಪಂಪ್‌, ಆಮ್ಲಜನಕ ಉತ್ಪಾದನಾ ಘಟಕ, ಎಟಿಎಂ ಸೇವೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಮೇ 23ರಂದು (ಭಾನುವಾರ) ಬೆಳಿಗ್ಗೆ 6ರಿಂದ 10ರವರೆಗೆ ಕೋವಿಡ್‌ ಮಾರ್ಗಸೂಚಿ ಅನ್ವಯ ಮಾಸ್ಕ್‌ ಧರಿಸಿ, ಅಂತರ ಕಾಯ್ದುಕೊಂಡು ಸಾರ್ವಜನಿಕರು ತರಕಾರಿ ಮತ್ತು ದಿನಸಿ ಸಾಮಗ್ರಿಗಳನ್ನು ಖರೀದಿಸಲು ವಿನಾಯಿತಿ ನೀಡಲಾಗಿದೆ.

ಈ ಅವಧಿಯಲ್ಲಿ ಕೋವಿಡ್‌ ಮಾರ್ಗಸೂಚಿ ಅನ್ವಯ ಅಂತ್ಯಸಂಸ್ಕಾರ ನಡೆಸಲು ಅನುಮತಿಸಲಾಗಿದೆ. ಈ ಲಾಕ್ ಡೌನ್ ನಿಯಮ ಉಲ್ಲಂಘಿಸಿದವರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ ಅನ್ವಯ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT