ಹಾನಗಲ್: ಇಲ್ಲಿನ ನ್ಯಾಯಾಲಯದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 4999 ಪ್ರಕರಣಗಳು ರಾಜೀ ಸಂಧಾನದ ಮೂಲಕ ಇತ್ಯರ್ಥಗೊಂಡವು.
ಆಸ್ತಿ ಸಂಬಂಧಿತ, ಕೌಟುಂಬಿಕ ಕಲಹ, ಮೋಟಾರ್ ವಾಹನ ಕಾಯ್ದೆಗೆ ಸಂಬಂಧಿತ ಪ್ರಕರಣಗಳು ಮತ್ತು ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು, ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳು, ವ್ಯಾಜ್ಯ ಪೂರ್ವ ಪ್ರಕರಣಗಳು ಲೋಕ ಅದಾಲತ್‌ನಲ್ಲಿ ಸಂಧಾನಕ್ಕೆ ಬಂದಿದ್ದವು.
ಮೂರು ನ್ಯಾಯಾಲಯಗಳಲ್ಲಿ ಲೋಕ ಅದಾಲತ್ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶೆ ರಾಜೇಶ್ವರಿ ಪುರಾಣಿಕ, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ವೆಂಕಟಪ್ಪ ಬಿ., ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಜನಾರ್ದನ ಎಸ್.ಕೆ. ಅವರ ಸಮ್ಮುಖದಲ್ಲಿ ಪ್ರಕರಣಗಳು ಸಂಧಾನದ ಮೂಲಕ ಇತ್ಯರ್ಥಗೊಂಡವು.
ಮೂರು ಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇದ್ದ 502 ಪ್ರಕರಣಗಳು ಮತ್ತು ವ್ಯಾಜ್ಯಪೂರ್ವ 4497 ಪ್ರಕರಣಗಳು ರಾಜೀ ಸಂಧಾನದೊಂದಿಗೆ ಇತ್ಯರ್ಥಗೊಂಡವು.