ಹಾನಗಲ್: ತಾಲ್ಲೂಕಿನ ಮಾಸನಕಟ್ಟಿ ಗ್ರಾಮದಲ್ಲಿ ಹಾವೇರಿ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರೋಡ್ ಶೋ ನಡೆಸಿ ಮತಯಾಚಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ, ಚುನಾವಣಾ ಪ್ರಚಾರಕ್ಕೆ ಬರುವ ಸ್ಟಾರ್ ಪ್ರಚಾರಕರ ಕುರಿತು ಪಕ್ಷ ತೀರ್ಮಾನ ಮಾಡಲಿದೆ. ನಟ ಸುದೀಪ ಸೇರಿದಂತೆ ಯಾರು ಪ್ರಚಾರಕ್ಕೆ ಬರುತ್ತಾರೆ ಎಂಬುದು ಇನ್ನೂ ಖಚಿತವಾಗಿಲ್ಲ ಎಂದರು.

ಹಲವು ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಅಭ್ಯರ್ಥಿಗಳ ಬದಲಾವಣೆಗೆ ಒತ್ತಡ ಹೇರುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ‘ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪಕ್ಷದ ತೀರ್ಮಾನ ಒಪ್ಪಿಕೊಂಡಿದ್ದಾರೆ. ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹಾಗೂ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ’ ಎಂದು ತಿಳಿಸಿದರು.

ಯಡಿಯೂರಪ್ಪ ಆಪ್ತರಿಗೆ ಸಿದ್ದರಾಮಯ್ಯ ಗಾಳ ಹಾಕಿದ್ದಾರೆ ಎಂಬ ಪ್ರಶ್ನೆಗೆ, ‘ಚುನಾವಣೆಯ ಯುದ್ಧ ಭೂಮಿಯಲ್ಲಿ ಅವರವರ ರಣತಂತ್ರ ಅವರು ಮಾಡುತ್ತಾರೆ. ನಮ್ಮ ರಣತಂತ್ರ ನಾವು ಮಾಡುತ್ತೇವೆ. ಅಂತಿಮವಾಗಿ ಜನ ಮಾಲೀಕರು. ಜನರೇ ತೀರ್ಮಾನ ಮಾಡುತ್ತಾರೆ’ ಎಂದು ಬೊಮ್ಮಾಯಿ ಹೇಳಿದರು.

ಮಾಜಿ ಸಚಿವ ಮನೋಹರ ತಹಸೀಲ್ದಾರ್, ಮಾಜಿ ಶಾಸಕ ಶಿವರಾಜ ಸಜ್ಜನರ, ಮುಖಂಡರಾದ ರಾಜಶೇಖರ ಕಟ್ಟೆಗೌಡ್ರ, ಸಂದೀಪ ಪಾಟೀಲ, ಮಾಲತೇಶ ಸೊಪ್ಪಿನ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.