ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಕರ್ತವ್ಯಕ್ಕೆ ಗೈರು: ಅಧಿಕಾರಿಗಳಿಗೆ ನೋಟಿಸ್

Published 15 ಏಪ್ರಿಲ್ 2024, 14:34 IST
Last Updated 15 ಏಪ್ರಿಲ್ 2024, 14:34 IST
ಅಕ್ಷರ ಗಾತ್ರ

ಬ್ಯಾಡಗಿ: ಚುನಾವಣಾ ಕರ್ತವ್ಯಕ್ಕೆ ಪೂರ್ವಾನುಮತಿ ಪಡೆಯದೇ ಗೈರಾದ ಇಬ್ಬರು ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಸಹಾಯ ಚುನಾವಣಾಧಿಕಾರಿ ಮಮತಾ ಹೊಸಗೌಡ್ರ ಆದೇಶಿಸಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಹಾವೇರಿ–ಗದಗ ಲೋಕಸಭಾ ಚುನಾವಣೆ ಪೂರ್ವಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಚುನಾವಣಾ ಕರ್ತವ್ಯ ಲೋಪವೆಸಗಿದ ರಾಣೆಬೆನ್ನೂರ ತಾಲ್ಲೂಕಿನ ಹನುಮಾಪುರದ ಮತಗಟ್ಟೆ ಮೇಲ್ವಿಚಾರಕ ಗಿರೀಶ ಪಾಟೀಲ ಮತ್ತು ಉಕ್ಕುಂದ ಮತಗಟ್ಟೆ ಮೇಲ್ವಿಚಾರಕ ಐ.ಎಂ.ತಹಶೀಲ್ದಾರ್‌ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದರು.

ಚುನಾವಣಾ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಬೇಕಾಗಿದ್ದು, ಮೊಬೈಲ್ ಸ್ವಿಚ್ ಆಫ್ ಮಾಡುವುದು, ಹೇಳದೇ ಕೇಳದೇ ಗೈರಾಗುವುದು ಬೇಜವಾಬ್ದಾರಿಯ ವರ್ತನೆಯಾಗಿದೆ. ಅಂತವರ ಮೇಲೆ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಲಾಗುವುದು ಎಂದು ತಿಳಿಸಿದರು.

ಪೋಲಿಂಗ್ ಬೂತಗಳನ್ನು ಸೆಕ್ಟರ್ ಅಧಿಕಾರಿಗಳು ಎರಡ್ಮೂರು ಬಾರಿ ಪರಿಶೀಲಿಸಬೇಕು. ಹಿರಿಯ ಅಧಿಕಾರಿಗಳು ಭೇಟಿ ನೀಡಿದ ವೇಳೆ ಮೂಲ ಸೌಲಭ್ಯಗಳ ಕೊರತೆ ಕಂಡು ಬಂದಲ್ಲಿ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಯುವ ಮತದಾರರ ಸೇರ್ಪಡೆ, ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಬೇಕಾಗಿದೆ. ಮತದಾರರಿಗೆ ಅಗತ್ಯವಾದ ಮಾಹಿತಿಗಳು ಪತ್ರಿಕಾ ಮಾಧ್ಯಮಗಳ ಮೂಲಕ ತಲುಪುವಂತೆ ನಿಗಾವಹಿಸಬೇಕು ಎಂದು ಹೇಳಿದರು.

ತಹಶೀಲ್ದಾರ್‌ ಪುಟ್ಟರಾಜ ಗೌಡ, ಬಿಇಒ ಎಸ್.ಜಿ.ಕೋಟಿ, ಉಮೇಶ ನಾಯಕ್, ಎಚ್,ಎಸ್,ಪೂಜಾರ, ಹನುಮಂತ ಲಮಾಣಿ, ವೈ.ಎಂ.ಮಟಗಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT