ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಶದ ಭದ್ರತೆಗಾಗಿ ಬಿಜೆಪಿಗೆ ಬೆಂಬಲ ಅವಶ್ಯ: ಬೈರತಿ ಬಸವರಾಜ

ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಮತಯಾಚನೆ
Published 2 ಮೇ 2024, 13:53 IST
Last Updated 2 ಮೇ 2024, 13:53 IST
ಅಕ್ಷರ ಗಾತ್ರ

ಶಿಗ್ಗಾವಿ: ‘ದೇಶದ ಭದ್ರತೆಗಾಗಿ ಬಿಜೆಪಿ ಬೆಂಬಲಿಸುವುದು ಅವಶ್ಯಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರಜೆಗಳಿಗೆ ರಕ್ಷಣೆ ನೀಡಿದ್ದಾರೆ. ಹೀಗಾಗಿ ಮತ್ತೆ ಮೋದಿ ಆಡಳಿತವನ್ನು ಮತದಾರರು ಬಯಸುತ್ತಿದ್ದಾರೆ’ ಎಂದು ಮಾಜಿ ಸಚಿವ ಬೈರತಿ ಬಸವರಾಜ ಹೇಳಿದರು.

ಪಟ್ಟಣಲ್ಲಿ ಗುರುವಾರ ನಡೆದ ತಾಲ್ಲೂಕು ಕುರುಬರ ಸಮಾಜದ ಸಭೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.

‘ಪ್ರಧಾನಿ ಮೋದಿ ಕೋವಿಡ್ ಅವಧಿಯಲ್ಲಿ ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ಹಾಕಿಸುವ ಮೂಲಕ ಜನಪರ ಕಾಳಜಿ ವಹಿಸಿದ್ದರು. ಹೀಗಾಗಿ ದೇಶದಲ್ಲಿ ಸಾವು, ನೋವು ಸಂಖ್ಯೆ ಕಡಿಮೆಯಾಯಿತು. ಮಹಿಳೆಯರ ಆರೋಗ್ಯದ ಹಿತದೃಷ್ಟಿಯಿಂದ ವಿಶೇಷ ಯೋಜನೆಗಳನ್ನು ರೂಪಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅಲ್ಲದೇ ಮಹಿಳೆಯರಿಗೆ ಮತ್ತು ಯುವಕರಿಗೆ ಉದ್ಯೋಗ ಕಲ್ಪಿಸುವ ಮೂಲಕ ಆರ್ಥಿಕ ಭದ್ರತೆ ನೀಡಿದ್ದಾರೆ. ಅಂತಹ ಪ್ರಧಾನಿಗೆ ಮತ ನೀಡುವ ಮೂಲಕ ಬಹುಮತದಿಂದ ಆಯ್ಕೆ ಮಾಡಲು ಜನ ಮುಂದಾಗಿದ್ದಾರೆ. ಮತ್ತೆ ಬಿಜೆಪಿ ಆಡಳಿತಕ್ಕೆ ಬರಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಮುಖಂಡ ಶ್ರೀಕಾಂತ ದುಂಡಿಗೌಡ್ರ ಮಾತನಾಡಿ, ‘ಜಗತ್ತಿನಲ್ಲಿ ದೇಶದ ಗೌರವ, ಘನತೆ ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಮಾಣಿಕ ಆಡಳಿತವೇ ಕಾರಣವಾಗಿದೆ. ಎಲ್ಲ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖಂಡ ರವಿ ದಂಡಿನ ಮಾತನಾಡಿ, ‘ದೇಶದಲ್ಲಿ ಉಜ್ವಲ ಯೋಜನೆಯಡಿ ಮಹಿಳೆಯರಿಗೆ ಆರೋಗ್ಯ ನೀಡಿದ್ದಾರೆ. ಆಯುಷ್ಮಾನ್ ಯೋಜನೆಯಡಿ ₹ 5 ಲಕ್ಷದವರೆಗೆ ಚಿಕಿತ್ಸಾ ಸೌಲಭ್ಯ ನೀಡಿದ್ದಾರೆ. ಸಾಲ ಸೌಲಭ್ಯ ನೀಡಿದ್ದಾರೆ. ಸ್ಥಳೀಯವಾಗಿ ಬಾಡ, ಕಾಗಿನೆಲೆ ಮತ್ತು ನೀರಾವರಿ ಯೋಜನೆಗೆ ಬೊಮ್ಮಾಯಿ ಮತ್ತು ಜೋಶಿ ಅವರು ಅನುದಾನ ಒದಗಿಸಿದ್ದಾರೆ. ಭಯೋತ್ಪಾದನೆ ನಿಗ್ರಹಕ್ಕೆ ತೆಗೆದುಕೊಂಡ ನಿರ್ಧಾರ ಉತ್ತಮವಾಗಿವೆ. ಅವುಗಳಿಂದಾಗಿ ಬಿಜೆಪಿಗೆ ಜನರು ಮತ ನೀಡಲು ಮುಂದಾಗಿದ್ದಾರೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಕುರಬರ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಫಕ್ಕೀರಪ್ಪ ಕುಂದೂರ, ಮುಖಂಡರಾದ ಪರಶುರಾಮ ದಿವಾದಾರ, ಮಾಲತೇಶ ಶ್ಯಾಗೋಟಿ, ಪ್ರವೀಣ ಹುರಳಿ, ನವೀಣ ರಾಮಗೇರಿ, ಶೇಖಣ್ಣ ಮರಿತಮ್ಮಣ್ಣವರ, ತಿಪ್ಪಣ್ಣ ಸಾತಣ್ಣವರ, ಭೀರಪ್ಪ ಸಣ್ಣತಮ್ಮಣ್ಣವರ, ರೇವಣ್ಣ ಸೂರಟೂರ, ಯಲ್ಲಪ್ಪ ಸುಂಕದ, ಶಿವಾನಂದ ಗುಡ್ಡಣ್ಣವರ, ಷಣ್ಮುಖ ಕಾಳಣ್ಣವರ, ಸದಾನಂದ ಬುದಿಹಾಳ, ಹನುಮಂತಪ್ಪ ಪಾಟೀಲ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT