ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

28 ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಮಾಧುಸ್ವಾಮಿ

Published 2 ಮೇ 2024, 15:35 IST
Last Updated 2 ಮೇ 2024, 15:35 IST
ಅಕ್ಷರ ಗಾತ್ರ

ಹಿರೇಕೆರೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಮಾಧುಸ್ವಾಮಿ ಹೇಳಿದರು.

ಪಟ್ಟಣದ ಬಿ.ಸಿ.ಪಾಟೀಲ ನಿವಾಸದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ನೀರಿಕ್ಷೆಗೂ ಮೀರಿ ಬಿಜೆಪಿ ಪರ ಒಲವು ಕಾಣುತ್ತಿದೆ. ದೇಶದಲ್ಲಿ ಹತ್ತು ವರ್ಷಗಳ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಹಾಗೂ ಅವರ ಜನಪರ ಯೋಜನೆಗಳು ದೇಶದ ಜನತೆಯ ಮನ್ನಣೆಗೆ ಪಾತ್ರವಾಗಿದ್ದು, ಮನೆ ಮನೆಯಲ್ಲಿ ಮೋದಿ ಅವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್‌ ಪಕ್ಷವನ್ನು ನಿದ್ದೆಗೆಡಿಸಿದೆ.

ದೇಶದ ಜನರು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ 28 ಸ್ಥಾನಗಳು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಜಿಲ್ಲೆಯಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ನೀರಾವರಿ ಸಚಿವವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಾವೇರಿ ಜಿಲ್ಲೆಗೆ ಮೆಗಾ ಡೇರಿ, ಮೆಡಿಕಲ್ ಕಾಲೇಜು, ನೀರಾವರಿ ಯೋಜನೆಗಳ ಅನುಷ್ಠಾನಗೊಳಿಸಿದ್ದಾರೆ ಹೀಗಾಗಿ ಬಸವರಾಜ ಬೊಮ್ಮಾಯಿ ಅವರ ಪರ ವಾತಾವರಣ ಕ್ಷೇತ್ರದಲ್ಲಿ ಗೆಲುವಿನ ಪೂರಕ ವಾತಾವರಣವಿದೆ ಎಂದರು.

ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ದೇಶದ ಸುರಕ್ಷತೆಯ ದೃಷ್ಟಿಯಿಂದ ಹಾಗೂ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತ ಬರಬೇಕು ಎಂಬುದು ದೇಶದ ಜನತೆಯ ಆಶಯವಾಗಿದೆ. ಮೋದಿ ಅವರು ಮೊಗದೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ ಎಂದರು.

ಮಾಜಿ ಸಚಿವ ಮಾಧುಸ್ವಾಮಿ ಅವರು ಹಿರೇಕೆರೂರ ವಿಧಾನ ಸಭಾ ಕ್ಷೇತ್ರದ ತಡಕನಹಳ್ಳಿ ಕೋಡ ಮಡ್ಲೂರು ಸೇರದಂತೆ ಹಿರೇಕೆರೂರ ಪಟ್ಟಣದಲ್ಲಿ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರ ಪರ ಮತ ಯಾಚಿಸಿದರು. ಕ್ಷೇತ್ರದಲ್ಲಿ ಮಾಧುಸ್ವಾಮಿ ಅವರು ಸಣ್ಣ ನೀರಾವರಿ ಸಚಿವರಾಗಿದ್ದಾಗ ಕ್ಷೇತ್ರದ ಕೆರೆಗಳ ಅಭಿವೃದ್ಧಿ ಹಾಗೂ ರಸ್ತೆ ದುರಸ್ತಿಗೆ ಅನುದಾನ ನೀಡಿದ್ದನ್ನು ತಾಲೂಕಿನ ಜನತೆ ಸ್ಮರಿಸಿ ಅವರ ಮೇಲೆ ವಿಶ್ವಾಸ ಹೊಂದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ಎಸ್.ಪಾಟೀಲ, ರವಿಶಂಕರ ಬಾಳಿಕಾಯಿ, ಬಸವರಾಜ ಹಾದಿಮನಿ, ಇಂದುಧರ, ಶಿವಲಿಂಗಪ್ಪ ತಲ್ಲೂರು, ಪ್ರತಾಪ್ ಕೆ.ಜೆ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT