ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ಲೋಕಸಭಾ ಕ್ಷೇತ್ರ: ಬೊಮ್ಮಾಯಿ ಸೇರಿ 14 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಇಂದು

Published 7 ಮೇ 2024, 5:01 IST
Last Updated 7 ಮೇ 2024, 5:01 IST
ಅಕ್ಷರ ಗಾತ್ರ

ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ 14 ಅಭ್ಯರ್ಥಿಗಳು ಅಂತಿಮ ಕಣದಲ್ಲಿದ್ದು, ಇಂದು ಭವಿಷ್ಯ (ಮಂಗಳವಾರ) ನಿರ್ಧಾರವಾಗಲಿದೆ.

ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

ಬೆಳಿಗ್ಗೆ 7 ರಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ.

ಲೋಕಸಭಾ ಸಾರ್ವತ್ರಿಕ ಚುನಾವಣೆಯ ದೇಶದ ಮೂರನೇ ಹಂತದ ಹಾಗೂ ರಾಜ್ಯದ ಎರಡನೇ ಹಂತದ ಮತದಾನ ಇದಾಗಿದೆ.

ಹಾವೇರಿ ಮತ ಕ್ಷೇತ್ರ ವ್ಯಾಪ್ತಿಯಲ್ಲಿ 1,982 ಮತಗಟ್ಟೆಗಳನ್ನು ತೆರೆಯಲಾಗಿದೆ. ಮತದಾರರಿಗೆ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಹಾಕಲಾಗುತ್ತಿದೆ.

ಪ್ರಜಾಪ್ರಭುತ್ವದ ಹಬ್ಬವಾದ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಸೌಲಭ್ಯಗಳನ್ನು ಕಲ್ಪಿಸಿದೆ. ಮತದಾರರು ನಿರ್ಭಿಡೆಯಿಂದ ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಲು ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಮನವಿ ಮಾಡಿದ್ದಾರೆ.

ಸುಗಮ ಮತದಾನಕ್ಕಾಗಿ ಹಾವೇರಿ ಲೋಕಸಭಾ ವ್ಯಾಪ್ತಿಯಲ್ಲಿ (ಹಾವೇರಿ–ಗದಗ ಜಿಲ್ಲೆ) 1,982 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 1,614 ಮತಗಟ್ಟೆಗಳಲ್ಲಿ ವೆಬ್‍ ಕಾಸ್ಟಿಂಗ್ ಅಳವಡಿಸಲಾಗಿದೆ. 39 ದುರ್ಬಲ, 370 ಸೂಕ್ಷ್ಮ ಮತಗಟ್ಟೆಗಳು ಹಾಗೂ 12 ಆರ್ಥಿಕ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ.

ಮತಗಟ್ಟೆ ಸಿಬ್ಬಂದಿ: 6,958 ಜನ ಮತದಾನ ಪ್ರಕ್ರಿಯೆ ವಿವಿಧ ಹಂತದ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಸುರಕ್ಷತೆ ಹಾಗೂ ಭದ್ರತೆಗಾಗಿ 2,525 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಒಳಗೊಂಡಂತೆ 9,483 ಜನರನ್ನು ನಿಯೋಜಿಸಲಾಗಿದೆ ಹಾಗೂ ಮೂರು ಕೇರಳ ಪೊಲೀಸ್ ಪಡೆ ಕಾರ್ಯ ನಿರ್ವಹಿಸುತ್ತಿದೆ.

ಹಾವೇರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 9,02,119 ಪುರುಷರು, 8,90,572 ಮಹಿಳೆಯರು ಹಾಗೂ 83 ಇತರರು ಸೇರಿದಂತೆ ಒಟ್ಟಾರೆ 17,92,774 ಮತದಾರರಿದ್ದಾರೆ. ಈ ಪೈಕಿ 57,577 ಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿದ್ದಾರೆ.

ಮತಗಟ್ಟೆಯಲ್ಲಿ ಸೌಲಭ್ಯ: ಕುಡಿಯುವ ನೀರಿನ ಸೌಲಭ್ಯ, ನೆರಳಿನ ಸೌಲಭ್ಯ, ಅಂಗವಿಕಲರಿಗೆ, ಹಿರಿಯ ಮತದಾರರಿಗೆ ಅನುಕೂಲವಾಗಲು ರ‍್ಯಾಂಪ್‌ ವ್ಯವಸ್ಥೆ ಹಾಗೂ ವೀಲ್‌ಚೇರ್ ವ್ಯವಸ್ಥೆ ಹಾಗೂ ಶೌಚಾಲಯ ವ್ಯವಸ್ಥೆ, ಮಕ್ಕಳ ಪಾಲನಾ ಕೇಂದ್ರ, ಭೂತಕನ್ನಡಿ, ಸೆಲ್ಫಿ ಕಾರ್ನರ್ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಯ ಅಥವಾ ರಾಜಕೀಯ ಪಕ್ಷದ ಹೆಸರು ಮತ್ತು ಚಿಹ್ನೆಯನ್ನೊಳಗೊಂಡ ಮತದಾರರ ಚೀಟಿಯನ್ನು ನೀಡಲು ಅವಕಾಶವಿಲ್ಲ.

* 17.92 ಲಕ್ಷ ಮತದಾರರು

* ಒಟ್ಟು 1,982 ಮತಗಟ್ಟೆಗಳ ಸ್ಥಾಪನೆ

* ಬೆಳಿಗ್ಗೆ 7ರಿಂದ ಮತದಾನ ಆರಂಭ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT