ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಮಹಾವೀರರ ಅಹಿಂಸಾ ಸಂದೇಶ ಅನುಕರಣೀಯ

ಭಗವಾನ್‌ ಮಹಾವೀರ ಜಯಂತಿ: ಶಾಸಕ ನೆಹರು ಓಲೇಕಾರ ಹೇಳಿಕೆ
Last Updated 14 ಏಪ್ರಿಲ್ 2022, 12:44 IST
ಅಕ್ಷರ ಗಾತ್ರ

ಹಾವೇರಿ: ‘ಭಗವಾನ್ ಮಹಾವೀರರ ಅಹಿಂಸಾ ಸಂದೇಶ ಹಾಗೂ ‘ಜೀವಿಸು ಜೀವಸಲು ಬಿಡು’ ಎಂಬ ಮಹಾವೀರರ ವಾಣಿ ಎಲ್ಲರಿಗೂ ಮಾದರಿಯಾಗಿದೆ. ಭಗವಾನ್ ಮಹಾವೀರರ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಬಸ್ತಿ ಓಣಿಯಲ್ಲಿರುವ ಭಗವಾನ್ ನೇಮಿನಾಥ ಜೈನ ಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಹಿಂಸೆಯೇ ಶ್ರೇಷ್ಠ ಧರ್ಮ ಎಂದು ಹೇಳಿದರು.

ಭೂಪಾಲ ಹೋಳಿಗೆ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಸಂಗೂರ, ನಗರಸಭೆ ಸದಸ್ಯೆ ಜಯಿರಾ ಖಾಜಿ, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ, ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌, ಹೆಚ್ಚುವರಿ ಜಿಲ್ಲಾಧಿಕಾರಿ ಎನ್‌. ತಿಪ್ಪೇಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ಕುಮಾರಿ ಪಲ್ಲವಿ ಸಾತೇನಹಳ್ಳಿ ಇದ್ದರು.

ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ಪ್ರಾಸ್ತಾವಿಕವಾಗಿ ಮಾತನಾಡಿದರು. ಭರತ ಹಜಾರಿ ಸ್ವಾಗತಿಸಿದರು, ಮಹಾವೀರ ಕಳಸೂರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT